ಹೆಲ್ಮೆಟ್ ಧರಿಸಿ ಅಮೂಲ್ಯ ಪ್ರಾಣ ಉಳಿಸಿ

4

Get real time updates directly on you device, subscribe now.


ತುಮಕೂರು: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ಅಪಘಾತ ಪ್ರಕರಣ ತಡೆಗಟ್ಟಬಹುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸಲಹೆ ನೀಡಿದರು.

ನಗರದ ಎಂಪ್ರೆಸ್ ಬಾಲಕಿಯ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಎಲ್ ಇ ಡಿ ವಾಹನಗಳ ಮುಖಾಂತರ ರಸ್ತೆ ಸುರಕ್ಷತಾ ನಿಯಮ ಕುರಿತು ಜನ ಜಾಗೃತಿ ಮೂಡಿಸುವ ವೀಡಿಯೋ ಸಂದೇಶವುಳ್ಳ ತುಣುಕುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾಹನ ಚಾಲಕರ ಬೇಜವಾಬ್ದಾರಿಯಿಂದ ಅಪಘಾತಗಳು ಸಂಭವಿಸುತ್ತಿವೆ, ಹೆಲ್ಮೆಟ್ ಇಲ್ಲದ ವಾಹನ ಚಾಲನೆ ವೀಲಿಂಗ್ ಸಾಹಸಗಳಿಂದ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಹೇಳಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್.ಎ.ವಿ. ಮಾತನಾಡಿ, ತುಮಕೂರು ನಗರದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಬಸ್ ನಿಲ್ದಾಣ, ಮಾರುಕಟ್ಟೆಗಳಲ್ಲಿ ಎಲ್ ಇ ಡಿ ವಾಹನಗಳ ಮುಖಾಂತರ ಜನಜಾಗೃತಿ ಮೂಡಿಸುವ ವೀಡಿಯೋ ಸಂದೇಶವುಳ್ಳ ತುಣುಕುಗಳನ್ನು ಪ್ರದರ್ಶಿಸುವ 250 ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ, ಎಂಪ್ರೆಸ್ ಕಾಲೇಜಿನ ಪ್ರಾಂಶುಪಾಲ ಮಲ್ಲೇಶ್ ಸೇರಿದಂತೆ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!