ತುಮಕೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಕರ್ನಾಟಕ ರಣಧೀರರ ವೇದಿಕೆ ಕೊಡಮಾಡುವ ರಾಣಿ ಚೆನ್ನಭೈರಾ ದೇವಿ ಪ್ರಶಸ್ತಿ 2024ಕ್ಕೆ ತುಮಕೂರು ವಿಶ್ವ ವಿದ್ಯಾಲಯದ ಕುಲಸಚಿವೆ ನಾಹಿದಾ ಜಮ್ ಜಮ್ ಭಾಜನರಾಗಿದ್ದಾರೆ.
ಕನ್ನಡ ನಾಡು-ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು, ಇತ್ತೀಚೆಗೆ ನೆಲಮಂಗಲದಲ್ಲಿ ನಡೆದ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಭುವನೇಶ್ವರಿ ಹಬ್ಬ ಮತ್ತು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ರಣಧೀರರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪಗೌಡ.ಕೆ.ಎಸ್. ಮತ್ತಿತರ ಗಣ್ಯರು ಈ ಸಂದರ್ಭ ಹಾಜರಿದ್ದರು.
ನಾಹಿದಾಗೆ ರಾಣಿ ಚೆನ್ನಭೈರಾ ದೇವಿ ಪ್ರಶಸ್ತಿ
Get real time updates directly on you device, subscribe now.
Prev Post
Next Post
Comments are closed.