ಸಿ.ಟಿ.ರವಿ ವಿರುದ್ಧ ಸರ್ಕಾರದ ಗೂಂಡಾಗಿರಿ

ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ವಜಾಗೊಳಿಸಲು ಬಿಜೆಪಿ ಆಗ್ರಹ

6

Get real time updates directly on you device, subscribe now.


ತುಮಕೂರು: ಸುವರ್ಣ ಸೌಧದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಶಾಂತಿ, ಅರಾಜಕತೆ, ಅಭದ್ರತೆ ಸೃಷ್ಟಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ವಜಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಜನರನ್ನು ವಂಚಿಸುತ್ತಾ ಬಂದಿದೆ, ತನ್ನ ಆಡಳಿತ ಹುಳುಕನ್ನು ಜನ ಪ್ರಶ್ನೆ ಮಾಡಬಾರದು ಎಂದು ವಿವಾದ ಸೃಷ್ಟಿಮಾಡಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವನ್ನು ಸರ್ಕಾರ ಮಾಡುತ್ತಿದೆ ಎಂದು ದೂರಿದರು.

ವಿಧಾನಸೌಧದ ಬಳಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವನ ವಿರುದ್ಧ ಕ್ರಮ ತೆಗೆದುಕೊಳ್ಳದೆ ಎಫ್ ಎಸ್ ಎಲ್ ವರದಿ ಪರಿಶೀಲಿಸುತ್ತೇವೆ, ಪರಿಶೀಲನೆ ಮಾಡುತ್ತೇವೆ ಎಂದು ಹೇಳಿಕೊಂಡ ಕಾಂಗ್ರೆಸ್ ಸರ್ಕಾರ ಆತನ ವಿರುದ್ಧ ಈವರೆಗೂ ಕ್ರಮ ತೆಗೆದುಕೊಂಡಿಲ್ಲ, ಆದರೆ ಸರ್ಕಾರದ ಲೋಪ ದೋಷಗಳನ್ನು ಪ್ರಶ್ನಿಸಲು ಮುಂದಾದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಹತ್ತಿಕ್ಕಲು ಸುಳ್ಳು ಆರೋಪದ ವಿವಾದ ಸೃಷ್ಟಿಸಲಾಗಿದೆ, ಅವರ ಮೇಲೆ ಹಲ್ಲೆ ಮಾಡಿ, ಕೊಲೆ ಬೆರದಿಕೆ ಹಾಕಲಾಗಿದೆ, ಆದರೆ ಸಿ.ಟಿ.ರವಿಯವರು ಅಭಿಪ್ರಾಯ ಹೇಳಲೂ ಅವಕಾಶ ನೀಡಿದೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಭಯೋತ್ಪಾದಕರ ರೀತಿ ನಡೆಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನವರು ಯಾವರೀತಿ ನಡೆಸಿಕೊಂಡರು, ಚುನಾವಣೆಯಲ್ಲಿ ಸೋಲಿಸಿದರು, ಭಾರತ ರತ್ನ ಪ್ರಶಸ್ತಿ ನೀಡದೆ, ಅಂಬೇಡ್ಕರ್ ಗೆ ಅವಮಾನ ಮಾಡಿದವರಿಗೆ ಪ್ರಶಸ್ತಿ ನೀಡಿದರು, ಇಂತಹ ಕಾಂಗ್ರೆಸ್ನವರು ಅಂಬೇಡ್ಕರ್ ಬಗ್ಗೆ ತಮ್ಮ ಬಣ್ಣ ಬಯಲಾಗುತ್ತದೆ ಎಂದು ಪಾರ್ಲಿಮೆಂಟ್ ನಲ್ಲಿ ಅಮಿತ್ ಶಾ ವಿರುದ್ಧ ಹುನ್ನಾರ ನಡೆಸಿ ವಿಷಯಾಂತರ ಮಾಡಿ ಗೊಂದಲ ಸೃಷ್ಟಿಸಿದರು ಎಂದು ಆರೋಪಿಸಿದರು.

ಗುಬ್ಬಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜ್ಯೋತಿ ತಿಪ್ಪೇಸ್ವಾಮಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಸ್.ಶಿವಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಉಪಾಧ್ಯಕ್ಷ ಭೈರಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನಪ್ಪ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚೇತನ್, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಮುಖಂಡರಾದ ಬನಶಂಕರಿಬಾಬು, ಗಣೇಶ್ ಪ್ರಸಾದ್, ಕೆ.ಪಿ.ಮಹೇಶ್, ಧನುಷ್, ಮಲ್ಲಿಕಾರ್ಜುನ್, ಮಂಜುನಾಥ್, ಮಹೇಶ್ ಬಾಬು, ಜಗದೀಶ್, ತಿಪ್ಪೇಸ್ವಾಮಿ, ಬಂಬೂ ಮೋಹನ್, ಅಕ್ಷಯ್ ಚೌಧರಿ, ವಿಜಯಕುಮಾರ್, ನಿಸರ್ಗ ರಮೇಶ್, ಶಬ್ಬೀರ್ ಅಹ್ಮದ್, ರಾಮಚಂದ್ರರಾವ್, ವೆಂಕಟೇಶಾಚಾರ್, ಜಯಶ್ರೀ ಸುರೇಶ್, ಗಾಯತ್ರಿ ಮಂಜುನಾಥ್, ವಸಂತ ಮತ್ತಿತರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!