ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು.
ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ, ತುಮಕೂರು ಜಿಲ್ಲೆಯಲ್ಲಿ 40 ಕಿ.ಮೀ. ನಲ್ಲಿ ಹಾದು ಹೋಗಲಿದೆ, 500 ಕೋಟಿ ರೂ. ವೆಚ್ಚದಲ್ಲಿ ಪುಣೆ- ಬೆಂಗಳೂರು 500 ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಸುರೇಶ್ ಗೌಡ, ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಮತ್ತಿತರರು ಹಾಜರಿದ್ದರು.
Comments are closed.