ತಿಪಟೂರು: ಬೆಸ್ಕಾಂ ಇಲಾಖೆಯ ಹಿರಿಯ ಸಹಾಯಕ, ವಿದ್ಯಾನಗರ ವಾಸಿ ಸಿ.ಎನ್.ಹರೀಶ್ (37) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ರಜಾ ಹಾಗೂ ಕಾರ್ಯ ನಿಮಿತ್ತ ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ನಂತರ ತೆಂಗಿನ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಚಾಲನೆ ಮಾಡುತ್ತಿದ್ದ ಹರೀಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಮೃತರಿಗೆ ನಾಲ್ಕು ವರ್ಷದ ಗಂಡು ಮಗು ಪತ್ನಿ, ತಂದೆ, ತಾಯಿ ಇದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಮೃತೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ, ಮೃತರ ಸಾವಿಗೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದುಃಖ ವ್ಯಕ್ತಪಡಿಸಿದ್ದಾರೆ.
Comments are closed.