ಮಧುಗಿರಿ: ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಉಪ ವಿಗಾಧಿಕಾರಿಗಳಿಗೆ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲಾ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಜನವರಿ 2 ರಂದು ಜಮೀನಿನ ವಿವಾದಕ್ಕೆ ಸಂಬಂಧಪಟ್ಟಂತೆ ದೂರು ನೀಡಲು ಬಂದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಡಿಓಎಸ್ ಪಿ ರಾಮಚಂದ್ರಪ್ಪ ಈ ಕೃತ್ಯ ಎಸಗಿದ್ದು ಈ ಸರ್ಕಾರದಲ್ಲಿ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯ ಇಲ್ಲದಂತಾಗಿದೆ, ನ್ಯಾಯ ಕೇಳಲು ಬಂದ ಸಾಮಾನ್ಯ ಮಹಿಳೆಯನ್ನು ನ್ಯಾಯ ಕೊಡಿಸುವುದಾಗಿ ಹೇಳಿ ತನ್ನ ಲೈಂಗಿಕ ತೃಷೆಗಾಗಿ ಬಳಸಿಕೊಂಡಿರುವ ಘಟನೆ ರಕ್ಷಕರೆ ಭಕ್ಷಕರಾಗಿರುವ ಈ ಸಂದರ್ಭದಲ್ಲಿ ಸಂತ್ರಸ್ತ ಮಹಿಳೆಗೆ ನ್ಯಾಯ ಕೊಡಿಸಿ ಈ ಕೂಡಲೇ ತಾವುಗಳು ಈ ಕೃತ್ಯವನ್ನು ಕೂಲಕಂಷವಾಗಿ ಪರಿಶೀಲಿಸಿ ಈ ಸಂಬಂಧಪಟ್ಟ ಅಧಿಕಾರಿಯನ್ನು ಸೇವೆಯಿಂದ ವಜಾ ಗೊಳಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಉಪವಿಗಾಧಿಕಾರಿಗಳ ಮುಖಾಂತರ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ನಿಕಟ ಪೂರ್ವ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಉಮಾ ವಿಜಯರಾಜ್, ಸುರೇಶ್ ಮತ್ತಿತರರು ಹಾಜರಿದ್ದರು.
ಡಿವೈಎಸ್ಪಿ ಲೈಂಗಿಕ ದೌರ್ಜನ್ಯಕ್ಕೆ ಖಂಡನೆ
Get real time updates directly on you device, subscribe now.
Prev Post
Next Post
Comments are closed.