ತುರುವೇಕೆರೆ: ಸರ್ಕಾರ ನೀಡುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳದೇ ಪರರಿಗೆ ಮಾರಿಕೊಂಡರೆ ಮಾಲಾಜಿಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳಿಸಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ ನೀಡಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಭೋವಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಕೊಳವೆ ಬಾವಿಯ ಪರಿಕರಗಳನ್ನು ಶಾಸಕ ಎಂ.ಟಿ.ಕೃಷ್ಣಪ್ಪ ಪಟ್ಟಣದಲ್ಲಿ ವಿತರಿಸಿ ಮಾತನಾಡಿ, ತಾಲ್ಲೂಕಿನ 28 ಫಲಾನುಭವಿಗಳಿಗೆ ತಲಾ 4.5 ಲಕ್ಷ ರೂ. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ಕೊರೆಸಿ ವಿದ್ಯುತ್ ಸಂಪರ್ಕ ಸೇರಿದಂತೆ ಪರಿಕರಗಳನ್ನು ನೀಡುವ ಯೋಜನೆ ಇದಾಗಿದೆ, ಒಟ್ಟು 1.26 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರೈತಾಪಿಗಳಿಗೆ ಸವಲತ್ತು ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಮಂಜುನಾಥ್, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಎಸ್.ಎಂ.ಮಹೇಂದ್ರ, ಮುಖಂಡರಾದ ಮುನಿಯೂರು ರಂಗಸ್ವಾಮಿ ಸೇರಿದಂತೆ ಹಲವು ಮುಖಂಡರು ಇದ್ದರು.
ಪಂಪ್, ಮೋಟಾರ್ ಮಾರಿಕೊಂಡ್ರೆ ಕ್ರಿಮಿನಲ್ ಕೇಸ್
Get real time updates directly on you device, subscribe now.
Prev Post
Next Post
Comments are closed.