ತುಮಕೂರು: ಸ್ವಾಮಿ ವಿವೇಕಾನಂದರ ಚಿಂತನೆಗಳು ಇಂದಿನ ಯುವ ಜನತೆಗೆ ಅವಶ್ಯಕವಾಗಿದ್ದು, ಅಂತಹ ಆದರ್ಶ ಮೈಗೂಡಿಸಿ ಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಡಿಸಿಕೊಳ್ಳಬಹುದು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಧೀರಾನಂದ ಮಹಾರಾಜ್ ತಿಳಿಸಿದರು.
ಕೇಂದ್ರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ತುಮಕೂರು, ಡಾ.ಬಿ.ಆರ್.ಅಂಬೇಡ್ಕರ್ ಯುವ ಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಖ್ಯೆ ತಿಪಟೂರು ಹಾಗೂ ಶ್ರೀಸಿದ್ದಗಂಗಾ ಶಿಕ್ಷಣ ಮಹಾ ವಿದ್ಯಾಲಯ ಇನ್ಹರ್ ವೀಲ್ ಕ್ಲಬ್ ತುಮಕೂರಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ಜನರಿಗೆ ಹಮ್ಮಿಕೊಂಡಿದ್ದ ಭಾಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿವೇಕಾನಂದರು ರಾಮಕೃಷ್ಣ ಮಿಷನ್ ಸ್ಥಾಪಿಸಿ ಆಧ್ಯಾತ್ಮಿಕ ಭಾವೈಕ್ಯತೆ ಸಾಧಿಸಲು ನೆರವಾಗಿದ್ದರು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಸೇವಕ ನಿಸರ್ಗ ರಮೇಶ್ ಮಾತನಾಡಿ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಬಗ್ಗೆ ಅಪಾರ ಆತ್ಮವಿಶ್ವಾಸ ಹೊಂದಿದ್ದರು, ಭವ್ಯ ಭಾರತದ ನಿರ್ಮಾಣ ಯುವ ಶಕ್ತಿಯಿಂದ ಮಾತ್ರ ಸಾಧ್ಯ ಎಂದು ನಂಬಿದ್ದರು ಎಂದರು.
ಮುಖ್ಯ ಅತಿಥಿಯಾಗಿದ್ದ ಇನ್ಹರ್ ವೀಲ್ ಕ್ಲಬ್ ಅಧ್ಯಕ್ಷೆ ಶೀಲಾಮಧು ಮಾತನಾಡಿ, ಯುವ ಜನತೆ ಸಮಾಜದಲ್ಲಿ ಸಾಮಾಜಿಕ ಸೇವಾ ಕೈಂಕರ್ಯ ಕೈಗೊಂಡು ಧ್ವನಿ ಇಲ್ಲದವರ ಅಶಕ್ತರ ಬಾಳಿಗೆ ಬೆಳಕಾಗಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಡಾ.ರಂಗಸ್ವಾಮಿ.ಎಂ.ಆರ್, ಸಂಸ್ಥೆ ಅಧ್ಯಕ್ಷ ರಾಜಶೇಖರ್, ಪ್ರಶಿಕ್ಷಣಾರ್ಥಿ ಕಾವ್ಯ, ಸಿದ್ದಗಂಗ ಶಿಕ್ಷಣ ಮಹಾ ವಿದ್ಯಾಲಯದ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಜರಿದ್ದರು.
Comments are closed.