ವಾಸ್ತವ ಸುದ್ದಿಗಳನ್ನು ಜನಮಾನಸಕ್ಕೆ ಮುಟ್ಟಿಸಿ

1

Get real time updates directly on you device, subscribe now.


ತುಮಕೂರು: ಕಲ್ಪತರುನಾಡಿನಲ್ಲಿ ಎರಡು ದಿನಗಳ ಕಾಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪ್ರಯುಕ್ತ ನಡೆದ ಮೆರವಣಿಗೆಗೆ ಅದ್ದೂರಿ ಚಾಲನೆ ದೊರೆಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಲಕ್ಷ್ಮೀ ಆನೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಕರ್ತರು ಭವಿಷ್ಯ, ಭೂತಕಾಲದ ಬಗ್ಗೆ ಹೆಚ್ಚು ಮಹತ್ವ ನೀಡದೆ ವರ್ತಮಾನದ ಬಗ್ಗೆ ಹೆಚ್ಚು ಗಮನ ಹರಿಸುವ ಮೂಲಕ ವಾಸ್ತವ ಸುದ್ದಿಗಳನ್ನು ಜನಮಾನಸಕ್ಕೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಪತ್ರಕರ್ತರು ಅನುಭವಿಸುತ್ತಿರುವ ಸಮಸ್ಯೆ, ಸೌಲಭ್ಯಗಳ ಕೊರತೆ ಬಗ್ಗೆ ಬೆಳಕು ಚೆಲ್ಲುವ ಕೆಲಸ ಈ ಸಮ್ಮೇಳನದ ವೇದಿಕೆ ಮೂಲಕ ಆಗಲಿ ಎಂದು ಶ್ರೀಗಳು ಆಶಿಸಿದರು.

ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಪತ್ರಿಕೋದ್ಯಮವನ್ನು ತುರ್ತು ಸಾಹಿತ್ಯವೆಂದು ಗುರುತಿಸಲಾಗಿದೆ, ಮನುಷ್ಯನಿಗೆ ಸಾಹಿತ್ಯದ ಅಭಿರುಚಿ ದಿನಪತ್ರಿಕೆಗಳ ಅವಲೋಕನದಿಂದ ಬರುತ್ತದೆ ಎಂದರು.
ನಗರದಲ್ಲಿ ನಡೆಯುತ್ತಿರುವುದು ಕೇವಲ ಪತ್ರಕರ್ತರ ಸಮ್ಮೇಳನವಲ್ಲ, ಇದೊಂದು ಸಾಂಸ್ಕೃತಿಕ ಹಬ್ಬವಾಗಿದೆ, ತುಮಕೂರಿನಲ್ಲಿ ಯಾವುದೇ ಕಾರ್ಯಕ್ರಮವಾದರೂ ರಾಜ್ಯದಲ್ಲಿ ಮಾದರಿ ಕಾರ್ಯಕ್ರಮವಾಗುತ್ತದೆ ಎಂದು ಹೇಳಿದರು.

ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳಿಗೆ ಸಹಕಾರ ರೂಪ, ಮಾನವೀಯ ರೂಪ ಕೊಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ, ನಮ್ಮ ವರ್ತಮಾನವನ್ನು ಗಟ್ಟಿಯಾಗಿ ರೂಪಿಸಿಕೊಂಡಾಗ ಪತ್ರಕರ್ತರ ಭವಿಷ್ಯ ಅರ್ಥಪೂರ್ಣವಾಗಿ ಮುಂದುವರೆಯುತ್ತದೆ ಎಂದರು.

ಹಿರೇಮಠಾಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪತ್ರಕರ್ತರು ಅಕ್ಷರ ಲೋಕದ ಪ್ರತಿನಿಧಿಗಳು ಮಾತ್ರವಲ್ಲ, ಜನಪರ ಧ್ವನಿಯ ಪ್ರತಿನಿಧಿಗಳು ಹೌದು, ಸೃಷ್ಟಿಕರ್ತನಿಗಿಂತಲೂ ಪತ್ರಕರ್ತ ದೊಡ್ಡವನು ಎನ್ನುವುದು ನನ್ನ ಅನಿಸಿಕೆ ಎಂದರು.

ನಂತರ ಟೌನ್ ಹಾಲ್ ವೃತ್ತದಿಂದ ಸಮ್ಮೇಳನ ನಡೆಯುವ ಶ್ರೀಸಿದ್ದಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಆವಣದವರೆಗೆ ಸಾಗಿದ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು, ಸಾಂಸ್ಕ ತಿಕ ಕಲಾ ತಂಡಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು,

Get real time updates directly on you device, subscribe now.

Comments are closed.

error: Content is protected !!