ಮ‘ಯವರ್ತಿಗಳನ್ನು ಸಂಪರ್ಕಿಸದಂತೆ ಮನವಿ

9

Get real time updates directly on you device, subscribe now.


ತುಮಕೂರು: ಜಿಲ್ಲಾಧಿಕಾರಿ ಶು‘ ಕಲ್ಯಾಣ್ ಅವರು ಮಂಗಳವಾರ ನಗರದ ಎಪಿಎಂಸಿ ಯಾರ್ಡ್ ನಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ‘ಟಿ ನೀಡಿ ಪರಿಶೀಲಿಸಿದರು.
ಮ‘ಯವರ್ತಿಗಳನ್ನು ಸಂಪರ್ಕಿಸಬೇಡಿ

ನಂತರ ರೈತರೊಂದಿಗೆ ಮಾತನಾಡಿದ ಅವರು ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ, ರೈತರು ಖರೀದಿ ಕೇಂದ್ರದಲ್ಲಿ ಮ‘ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ನಿಯೋಜಿತ ಅಧಿಕಾರಿಗಳನ್ನೇ ಸಂಪರ್ಕಿಸಬೇಕೆಂದು ಮನವಿ ಮಾಡಿದರು.

ನೋಂದಣಿಗೆ ಮಾರ್ಚ್ ಅಂತ್ಯದವರೆಗೂ ಅವಕಾಶ
ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿಗಾಗಿ ಮಾರ್ಚ್ 31ರವರೆಗೆ ಮಾತ್ರ ಅವಕಾಶವಿದ್ದು, ರೈತರು ತಡ ಮಾಡದೇ ಅಗತ್ಯ ದಾಖಲೆಗಳೊಂದಿಗೆ ಖರೀದಿ ಕೇಂದ್ರಕ್ಕೆ ‘ಟಿ ನೀಡಿ ನೋಂದಣಿ ಮಾಡಿಸಿ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆಯಬೇಕೆಂದರು.

ರಾಗಿ ಮಾರಾಟಕ್ಕೆ ರೂಟ್ ಸ್ ಐಡಿ ಕಡ್ಡಾಯ
ಖರೀದಿ ಕೇಂದ್ರದಲ್ಲಿ ರೈತರು ರಾಗಿ ಮಾರಾಟ ಮಾಡಲು ಕಡ್ಡಾಯವಾಗಿ ರೂಟ್ ಸ್ ಐಡಿ ಹೊಂದಿರಬೇಕು, ರೂಟ್ ಸ್ ಐಡಿಗೆ ಸೇರ್ಪಡೆಗೊಂಡಿರುವ ಸರ್ವೆ ನಂಬರ್ ಗಳಲ್ಲಿ ಬೆಳೆದ ರಾಗಿ ಮಾತ್ರ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವುದು, ಸರ್ವೆ ನಂಬರ್ಗಳಲ್ಲಿ ರಾಗಿ ಬೆಳೆದಿರುವ ಬಗ್ಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವುದು ಕಡ್ಡಾಯವೆಂದು ತಿಳಿಸಿದರು.
ಸರ್ವೆ ನಂಬರ್ ಗಳನ್ನು ರೂಟ್ ಸ್ ಐಡಿಗೆ ಸೇರ್ಪಡೆ ಮಾಡಿ
ರೈತರು ತಮ್ಮ ಹೆಸರಿನಲ್ಲಿರುವ ಜಮೀನಿನ ಎಲ್ಲ ಸರ್ವೆ ನಂಬರ್ ಗಳನ್ನು ತಮ್ಮ ವ್ಯಾಪ್ತಿಯ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯನ್ನು ಸಂಪರ್ಕಿಸಿ ರೂಟ್ ಸ್ ಐಡಿಗೆ ಸೇರ್ಪಡೆ ಮಾಡಬೇಕೆಂದು ಹೇಳಿದರು.

ತಾಂತ್ರಿಕ ಸಮಸ್ಯೆಗಳಿಗೆ ಸಹಾಯವಾಣಿ ಸಂಪರ್ಕಿಸಿಃ
ಜಿಲ್ಲೆಯಲ್ಲಿ ತೆರೆಯಲಾಗಿರುವ ಎಲ್ಲ 10 ಖರೀದಿ ಕೇಂದ್ರಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಅಧಿಕಾರಿಗಳು ರಾಗಿಯನ್ನು ಮ‘ಯವರ್ತಿಗಳಿಂದ ಖರೀದಿಸದೆ ರೈತರಿಂದ ಮಾತ್ರ ಖರೀದಿಸಬೇಕು. ರಾಗಿ ಖರೀದಿ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಬೇಕು, ರೈತರ ರೂಟ್ ಸ್ ಐಡಿ ಬಗ್ಗೆ ತಾಂತ್ರಿಕ ಸಮಸ್ಯೆಗಳುಂಟಾದಲ್ಲಿ ಕೃಷಿ ಇಲಾಖೆಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಸಂಖ್ಯೆ 8884006306, 8884006308ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

50617 ರೈತರ ನೋಂದಣಿ
ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳಲ್ಲಿ ಈವರೆಗೆ 749973 ಕ್ವಿಂಟಾಲ್ ರಾಗಿ ಖರೀದಿಗಾಗಿ 50617 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಶೀಘ್ರವಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯ

ಖರೀದಿಸಿದ ರಾಗಿಯನ್ನು ರಾಜ್ಯ ಉಗ್ರಾಣ ನಿಗಮಗಳಿಗೆ ಸಾಗಾಣಿಕೆ ಮಾಡಲು ಗುತ್ತಿಗೆದಾರರನ್ನು ನೇಮಕ ಮಾಡಲಾಗಿದ್ದು, ಸಾಗಾಣಿಕೆ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕೆಂದು ಸೂಚನೆ ನೀಡಿದರು.
ಈ ಸಂದ‘ರ್ದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್, ರೈತ ಬಂ‘ಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!