ತುಮಕೂರು: ಮಹಾ ನಗರಪಾಲಿಕೆ ವ್ಯಾಪ್ತಿಯ ವಸತಿ ವಂಚಿತರಿಗೆ ಹಾಗೂ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ನೀಡಲು ಪ್ರಯಾಣಿಕ ಪ್ರಯತ್ನ ಮಾಡಲಾಗುವುದು ಎಂದು ತುಮಕೂರು ನಗರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.
ತುಮಕೂರು ಮಹಾ ನಗರ ಪಾಲಿಕೆಯ ಸಭಾಂಗಣದಲ್ಲಿ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆಯಲ್ಲಿ ಮಾತನಾಡಿ, ತುಮಕೂರು ನಗರದ ಜಿಲ್ಲಾ ಕೇಂದ್ರವಾಗಿರುವುದರಿಂದ ವಸತಿ ವಂಚಿತರ ಸಂಖ್ಯೆ ಹೆಚ್ಚಾಗಿದ್ದು ಸರ್ಕಾರಿ ಭೂಮಿ ಗುರುತಿಸಿ ವಸತಿ ಯೋಜನೆಗೆ ಭೂಮಿ ಮೀಸಲು ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ತುಮಕೂರು ಮಹಾ ನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ನೀಡುವುದು ಸಹ ನಮ್ಮ ಕರ್ತವ್ಯವಾಗಿದೆ, ತುಮಕೂರು ನಗರದ ಸ್ವಚ್ಛತೆಗೆ ಹಗಲು ಇರುಳು ದುಡಿಯುತ್ತಿದ್ದಾರೆ, ಪೌರಕಾರ್ಮಿಕರ ಜೊತೆಗೆ ಕುಟುಂಬದವರಿಗೂ ಅನುಕೂಲವಾಗುವಂತೆ ಅಂಗನವಾಡಿ, ಶಾಲೆ, ಆಸ್ಪತ್ರೆ ಒಂದೇ ಸ್ಥಳದಲ್ಲಿ ಇರುವಂತೆ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಶಾಸಕರು ಸಭೆಯಲ್ಲಿ ಸೂಚನೆ ನೀಡಿದರು.
ಸಭೆಯಲ್ಲಿ ತುಮಕೂರು ಮಹಾ ನಗರಪಾಲಿಕೆಯ ಆಯುಕ್ತರಾದ ಅಶ್ವಿಜ, ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ವಸತಿ ಶಾಖೆಯ ಅಧಿಕಾರಿಗಳು, ಸ್ಮಾರ್ಟ್ಸಿಟಿ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Comments are closed.