ದೆಹಲಿ: ದೇಶದಲ್ಲಿ ಕೋವಿಡ್ ನಿಂದ ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತೆ ಕಂಡು ಬರುತ್ತಿದೆ, ಇದನ್ನು ನಿಯಂತ್ರಿಸುವ ಉದ್ದೇಶದಿಂದ ಅಗತ್ಯವಾಗಿರುವ ಲಸಿಕೆ ಮತ್ತು ಔಷಧಿಗಳನ್ನು ಪೂರೈಕೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ರಾಷ್ಟ್ರೀಯ ನೀತಿ ರೂಪಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ನೇತೃತ್ವದ ಪೀಠವು ನಾಗರೀಕರ ಹಿತಸಕ್ತಿಯಿಂದ ಸ್ವಯಂ ಪ್ರೇರಣೆಯಿಂದ ಈ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಆಯಾ ರಾಜ್ಯಗಳಿಗೆ ಸಂಬಂಧಿಸಿದಂತೆ ಲಾಕ್ ಡೌನ್ ಹೇರುವ ಅಧಿಕಾರ ಆ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ. ದೇಶದ ವಿವಿಧ ಭಾಗಗಳಲ್ಲಿ ಕೊರೊನಾದಿಂದ ಸಾವಿನ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಬೇಕಾಗಿರುವ ಔಷಧ, ಆಮ್ಲಜನಕ, ಲಸಿಕೆ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೊರ್ಟ್ ಹೇಳಿದೆ.
ಸಮರ್ಪಕವಾಗಿ ಲಸಿಕೆ ಉತ್ಪಾದನೆ ಜೊತೆಗೆ ಸಾರ್ವಜನಿಕರಿಗೆ ಉಚಿತವಾಗಿ ಲಭ್ಯವಾಗಬೇಕಿದೆ. ಖಾಸಗಿ ಆಸ್ಪತ್ರೆಗಳ ಮೊರೆ ಹೋಗದಂತೆ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಸ್ಪಂದಿಸಬೇಕಿದೆ. ಇದು ಎಷ್ಟರ ಮಟ್ಟಿಗೆ ಸಾಧ್ಯವಾಗುತ್ತೆ ಎಂಬುದರ ಮೇಲೆ ಕೋವಿಡ್ ನಿಯಂತ್ರಣ ಸಾಧ್ಯ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ.
Get real time updates directly on you device, subscribe now.
Prev Post
Comments are closed.