ಚಿಕ್ಕನಾಯಕನಹಳ್ಳಿ: ಪಟ್ಟಣದ ತಾಲೂಕು ಕಚೇರಿಯಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳ ತುರ್ತು ಸಭೆ ನಡೆಸಿ ಕೊರೊನಾ ತಡೆಗಟ್ಟಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಆರೋಗ್ಯ ಇಲಾಖೆ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ, ಪ್ರಾಥಮಿಕ ಸಂಪರ್ಕದವರಿಗೆ ಕಡ್ಡಾಯವಾಗಿ ಸ್ವ್ಯಾಬ್ ಟೆಸ್ಟಿಂಗ್ ಮಾಡಿಸಬೇಕು, ಕೋವಿಡ್ ಕೇರ್ ಸೆಂಟರ್ನ್ನು ಪ್ರಾರಂಭಿಸಬೇಕು, ಹೋಂ ಕ್ವಾರಂಟೈನ್ನಲ್ಲಿ ಇರುವ ಕೋವಿಡ್ ಸೋಂಕಿತರನ್ನು ಕಸಬಾ ಹೋಬಳಿ ಮೇಲನಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಮುರಾರ್ಜಿ ಶಾಲೆಯಲ್ಲಿ ಕೋವಿಡ್ ಸೆಂಟರ್ ಪ್ರಾರಂಭಿಸಬೇಕು, ಬೆಂಗಳೂರು ಹಾಗೂ ಹೊರ ಜಿಲ್ಲೆಗಳಿಂದ ಗ್ರಾಮಗಳಿಗೆ ಯಾರಾದರೂ ಭೇಟಿ ನೀಡಿದರೆ ಈ ಬಗ್ಗೆ ಪರಿಶೀಲಿಸಿ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು, ಶಾಲಾ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ತರಕಾರಿ ಮಾರಾಟ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು, ಬಸ್ ನಿಲ್ದಾಣಗಳಲ್ಲಿ ಹೆಚ್ಚು ಜನ ಸೇರದಂತೆ ಕ್ರಮವಹಿಸಬೇಕು, ಪಟ್ಟಣದಲ್ಲಿ ಹೆಚ್ಚು ಜನ ಸೇರುವ ಪ್ರದೇಶಕ್ಕೆ ಸ್ಯಾನಿಟೈಸರ್ ಮಾಡಿಸಬೇಕು ಎಂದರು.
ತಾಲೂಕಿನಲ್ಲಿ ಒಟ್ಟು 251 ಕೊರೊನಾ ಆಕ್ಟಿವ್ ಪ್ರಕರಣಗಳಿದ್ದು, 19 ಜನ ತಾಲೂಕು ಆಸ್ಪತ್ರೆಯಲ್ಲಿ, ಒಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ, ಉಳಿದವರು ಹೋಮ್ ಕ್ವಾರಂಟೈನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದರು.
ಈ ಸಂದರ್ಭಲ್ಲಿ ತಹಶೀಲ್ದಾರ್ ತೇಜಸ್ವಿನಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ನವೀನ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ , ಪಿಎಸ್ಐ ಹರೀಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿ: ಮಾಧುಸ್ವಾಮಿ
Get real time updates directly on you device, subscribe now.
Prev Post
Comments are closed.