ಬೆಂಗಳೂರು: ಮಂಗಳವಾರ ಅಂದರೆ ಏಪ್ರಿಲ್ 27ರ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿ, ಈ ಕೋವಿಡ್ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಾ ಮುತ್ತಾ ಹೆಚ್ಚು ಹರಡುತ್ತಿದೆ. ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಕೆಲವು ನಿರ್ಧಾರಕ್ಕೆ ಬಂದಿದ್ದೇವೆ. ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ 14-15 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ರಾತ್ರಿಯಿಂದ ಲಾಕ್ ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದೆ. ಮೇ ಮೊದಲ ವಾರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲಿದ್ದು, ಸೋಂಕಿತರ ಸಂಖ್ಯೆ ಡಬಲ್, ತ್ರಿಬಲ್ ಆಗಲಿದೆ. ಹೀಗಾಗಿ ತಜ್ಞರ ಸಲಹೆಯಂತೆ ಲಾಕ್ಡೌನ್ ಮಾಡಲಾಗಿದೆ ಎಂದರು.
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,52,991 ಪ್ರಕರಣಗಳು ದಾಖಲಾಗಿದ್ದು, 2,891 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾನುವಾರ ಕೂಡ ದೇಶದಲ್ಲಿ 3.55 ಹೊಸ ಕೇಸ್ಗಳು, 2,807 ಸಾವುಗಳು ದಾಖಲಾಗಿವೆ. ಈ ಎರಡೂ ಸಂಖ್ಯೆಗಳು ಜಗತ್ತಿನ ಉಳಿದೆಲ್ಲ ರಾಷ್ಟ್ರಗಳಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆಗಿಂತ ಜಾಸ್ತಿ. ದೇಶದಲ್ಲಿ ಕೇವಲ 7 ದಿನಗಳಲ್ಲಿ ಅಂದರೆ ಏಪ್ರಿಲ್ 18-25ರವರೆಗೆ 22.49 ಲಕ್ಷ ಕೊರೊನಾ ಕೇಸ್ಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಏಳುದಿನಗಳಲ್ಲಿ 22 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲು ಮತ್ತು ಅದೂ ಭಾರತದಲ್ಲೇ ಆಗಿದೆ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ. ಈ ಬಗ್ಗೆ ರೂಪುರೇಷೆಗಳನ್ನು ಆರೋಗ್ಯ ಇಲಾಖೆ ಪ್ರಕಟಿಸಲಿದೆ. ಈ ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತದೆ. ಇದು ರಾಜ್ಯಾಧ್ಯಂತ ಜಾರಿಯಲ್ಲಿ ಇರಲಿದೆ ಎಂದರು.
ಏ. 27ರ ರಾತ್ರಿಯಿಂದ 14 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್
Get real time updates directly on you device, subscribe now.
Prev Post
Next Post
Comments are closed.