ಕೊರೊನಾ ಲಸಿಕೆ ಹಾಕಿಸಿ ಮಹಾಮಾರಿ ದೂರ ಮಾಡಿ

540

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ, ಅದರಲ್ಲಿಯೂ ತುಮಕೂರು ನಗರದಲ್ಲಿ ಕೊರೊನಾ ಮಹಾಮಾರಿ ನಾಗಲೋಟಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ಕೆ ಜಿಲ್ಲಾಡಳಿತ ಈಗಾಗಲೇ ಮುಂದಾಗಿದ್ದು, ಇದರ ಅನ್ವಯ ನಗರದ 25ನೇ ವಾರ್ಡ್ ನ ಬಿ.ಹೆಚ್‌.ರಸ್ತೆಗೆ ಹೊಂದಿಕೊಂಡಂತೆಯೇ ಇರುವ ಜೈನ ಭವನದಲ್ಲಿ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ರಾಜಧಾನಿ ಬೆಂಗಳೂರಿಗೆ ಹತ್ತಿರ ಇರುವ ತುಮಕೂರು ನಗರದಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕಾರ್ಯವನ್ನು ಸಮರೋಪಾದಿಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ನಗರಪಾಲಿಕೆ ನಡೆಸುತ್ತಿದೆ, ನಗರದ ಸಿದ್ದಗಂಗಾ ಆಸ್ಪತ್ರೆಯ ಪಕ್ಕದಲ್ಲಿಯೇ ಇರುವ ಜೈನ್‌ ಭವನದಲ್ಲಿ 25ನೇ ವಾರ್ಡ್‌ನ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಾರ್ಡ್ ನ ಸದಸ್ಯೆ ಮಂಜುಳ ಆದರ್ಶ ಅವರು ನಗರದಲ್ಲಿ ಹಿಡಿತಕ್ಕೆ ಸಿಗದಂತೆ ನಾಗಾಲೋಟದಲ್ಲಿ ಮುನ್ನುಗುತ್ತಿರುವ ಕೋವಿಡ್‌ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ 2ನೇ ಹಂತದ ಉಚಿತ ಲಸಿಕೆ ನೀಡುವ ಕಾರ್ಯ ಚಾಲ್ತಿಯಲ್ಲಿದೆ, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಯನ್ನು ಸರಕಾರ ನೀಡುತ್ತಿದ್ದು, ಜನರು ಸರಕಾರದ ಮಾರ್ಗಸೂಚಿ ಅನ್ವಯ ಲಸಿಕೆ ಪಡೆದು ಮನೆಗಳಿಗೆ ತೆರಳಬೇಕು. ಲಸಿಕಾ ಕೇಂದ್ರಗಳಿಗೆ ಬರುವಾಗ ಮಾಸ್ಕ್ ಧರಿಸುವುದು ಕಡ್ಡಾಯ, ಹಾಗೆಯೇ ಮನೆಗೆ ತರಳುವಾಗಲು ಸರಕಾರದ ನಿಯಮಾನುಸಾರ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವಿನಯ್‌ ಜೈನ್‌, ತುಮಕೂರು ಮಹಾನಗರಪಾಲಿಕೆ ಹಾಗೂ ಆರೋಗ ಇಲಾಖೆ ಸಿಬ್ಬಂದಿ ಇದ್ದರು.

Get real time updates directly on you device, subscribe now.

Comments are closed.

error: Content is protected !!