ಕೋವಿಡ್‌ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ ಪಾಲಿಸಿ

531

Get real time updates directly on you device, subscribe now.

ಶಿರಾ: ಕೊರೊನಾ ನಿಯಂತ್ರಣಕ್ಕೆ ಸರಕಾರದ ನಿಯಮಗಳನ್ನು ಜನತೆ ಕಟ್ಟು ನಿಟ್ಟಾಗಿ ಪಾಲಿಸಲು ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು, ಕೊರೊನಾದ ಬಗ್ಗೆ ಇರುವ ಆತಂಕ ದೂರ ಮಾಡಬೇಕಿದೆ, ಶಿರಾ ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣ ದಿನೇ ದಿನೆ ಹೆಚ್ಚಳವಾಗುತ್ತಿದ್ದು, ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಕೋವಿಡ್‌ ಎರಡನೇ ಅಲೆ ತಾಲ್ಲೂಕಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಮಿನಿ ವಿಧಾನಸೌಧದಲ್ಲಿ ತುರ್ತು ಸಭೆ ನಡೆಸಿ ಕೋವಿಡ್‌ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೋವಿಡ್‌ ಸೋಂಕಿತರ ಪತ್ತೆಗಾಗಿ ಸರ್ವೆ ಕಾರ್ಯ ತ್ವರಿತಗತಿಯಲ್ಲಿ ನಡೆಸಬೇಕು, ಸಾರ್ವಜನಿಕರು ಸಹಕಾರ ನೀಡುವ ಮೂಲಕ ಅನಗತ್ಯವಾಗಿ ಹೊರಗೆ ಬರಬಾರದು. ಕೋವಿಡ್‌ ವಾರಿಯರ್ಸ್ ದೃತಿಗೆಡದೆ ತಮ್ಮ ಕರ್ತವ್ಯ ನಿಷ್ಟೆ ಮೆರಯಬೇಕು, ಎಲ್ಲರೂ ಒಟ್ಟಾಗಿ ಕೋವಿಡ್‌ ಹೋಗಲಾಡಿಸಲು ಶ್ರಮಿಸಬೇಕು ಎಂದರು.
ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಮಾತನಾಡಿ ಶಿರಾ ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಕೊವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ, ಕೋವಿಡೇತರ ರೋಗಿಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 120 ಬೆಡ್‌ಗಳ ವ್ಯವಸ್ಥೆ ಇದ್ದು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 100 ಬೆಡ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಚೆನ್ನಬಸಪ್ಪ ಸೋಮಪ್ಪ ಕಡಕೋಳ, ತಹಶೀಲ್ದಾರ್‌ ಮಮತ.ಎಂ., ಡಿವೈಎಸ್‌ಪಿ ಕುಮಾರಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ಪೌರಾಯುಕ್ತ ಪರಮೇಶ್ವರಪ್ಪ, ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್‌ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಖಾಸಗಿ ವೈದ್ಯರು ಹಾಜರಿದ್ದರು.

ಶಿರಾ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿರುವ ಕೋವಿಡ್‌ ನಿಗಾ ಘಟಕಕ್ಕೆ ಭೇಟಿ ನೀಡಿದ ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ರೋಗಿಗಳ ಆರೋಗ್ಯದ ಬಗ್ಗೆ ವಿಚಾರಿಸಿ, ಆತಂಕ ಪಡೆದೆ ಧೈರ್ಯವಾಗಿರಿ ಶೀಘ್ರ ಗುಣಮುಖರಾಗಲಿದ್ದೀರಿ ಎಂದು ಧೈರ್ಯ ತುಂಬಿದರು. ತಹಸೀಲ್ದಾರ್‌ ಎಂ.ಮಮತ, ಕಸಬಾ ಕಂದಾಯ ನಿರೀಕ್ಷಕ ಮಂಜುನಾಥ್‌ ಇತರರು ಹಾಜರಿದ್ದರು.

ಶಿರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಸೋಂಕಿತ ರೋಗಿಗಳಿಗೆ ಹಾಗೂ ಸಹಾಯಕರಿಗೆ ಮತ್ತು ನಿರಾಶ್ರಿತರಿಗೆ ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಅಭಿಮಾನಿ ಬಳಗದಿಂದ ಉಚಿತ ಸಿದ್ಧ ಆಹಾರ ವಿತರಣೆ ಮಾಡಲಾಯಿತು.

Get real time updates directly on you device, subscribe now.

Comments are closed.

error: Content is protected !!