ರೇಣುಕಾ ವಿದ್ಯಾಪೀಠದಲ್ಲಿ ಕೊವಿಡ್‌ ಕೇರ್‌ ಸೆಂಟರ್

104

Get real time updates directly on you device, subscribe now.

ತುಮಕೂರು: ನಗರದ ಬಸವೇಶ್ವರ ರಸ್ತೆಯಲ್ಲಿರುವ ರೇಣುಕಾ ವಿದ್ಯಾಪೀಠದಲ್ಲಿ 100 ಹಾಸಿಗೆಯುಳ್ಳ ಕೋವಿಡ್‌ಕೇರ್‌ ಸೆಂಟರ್‌ ಪ್ರಾರಂಭಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಅವರು ಸ್ಥಳ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಜಿಪಂ ಸಿಇಓ ವಿದ್ಯಾಕುಮಾರಿ, ಡಿಹೆಚ್‌ಓ ಡಾ.ನಾಗೇಂದ್ರಪ್ಪ, ತಹಶೀಲ್ದಾರ್‌ ಮೋಹನ್‌ಕುಮಾರ್‌ ಅವರೊಂದಿಗೆ ರೇಣುಕಾ ವಿದ್ಯಾಪೀಠಕ್ಕೆ ಭೇಟಿ ನೀಡಿದ ಸಚಿವ ಮಾಧುಸ್ವಾಮಿ ಅವರು ಶಾಲೆಯ ಕೊಠಡಿಗಳನ್ನು ವೀಕ್ಷಿಸಿ ಕೋವಿಡ್‌ ಐಸೋಲೇಷನ್‌ ವಾರ್ಡ್‌ ಸ್ಥಾಪಿಸಲು ಸೂಕ್ತವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಮೊದಲ ಹಂತವಾಗಿ 100 ಹಾಸಿಗೆಯುಳ್ಳ ಕೋವಿಡ್‌ ಕೇರ್‌ ಸ್ಥಾಪನೆಗೆ ಸೂಚನೆ ನೀಡಿದರು.
ಬೆಡ್‌ ಮತ್ತು ಹಾಸಿಗೆ ವ್ಯವಸ್ಥೆಯನ್ನು ರೇಣುಕಾ ವಿದ್ಯಾಪೀಠದಿಂದ ಮಾಡಲಾಗುತ್ತಿದೆ, ಉಳಿದಂತೆ ಔಷಧಿ, ವೈದ್ಯರು, ನರ್ಸ್‌ಗಳ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಿಕೊಡುವುದಾಗಿ ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ನಗರ ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್‌ ಮಾತನಾಡಿ, ಈಗಾಗಲೇ ನಗರದಲ್ಲಿ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ 25 ಸಾವಿರಕ್ಕೂ ಅಧಿಕ ಜನರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು, ಅದೇರೀತಿ ಕೋವಿಡ್‌ನಿಂದ ನರಳುತ್ತಿರುವ ರೋಗಿಗಳಿಗೆ ಸೂಕ್ತ ಕಾಲಕ್ಕೆ ಚಿಕಿತ್ಸೆ ದೊರೆಯಲೆಂಬ ಉದ್ದೇಶದಿಂದ ಈ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲು ಮುಂದಾಗಿರುವುದಾಗಿ ಹೇಳಿದರು.
ಈ ಕೋವಿಡ್‌ಕೇರ್ ಸೆಂಟರ್‌ ಪ್ರಾರಂಭಿಸಲು ಮಾಜಿ ಸಚಿವ ಸೊಗಡು ಶಿವಣ್ಣ ಅವರು ಪ್ರೇರಣೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ರಮೇಶ್‌ಬಾಬು, ಚಂದ್ರಮೌಳಿ, ಶಿವಕುಮಾರ್‌, ಪ್ರಸನ್ನ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!