ಕವಿ ಜರಗನಹಳ್ಳಿ ಶಿವಶಂಕರ್ ಇನ್ನಿಲ್ಲ…

146

Get real time updates directly on you device, subscribe now.

ಬೆಂಗಳೂರು: ಕೆಲದಿನಗಳ ಹಿಂದೆ ಕೋವಿಡ್ ಪೀಡಿತರಾಗಿದ್ದ ಶಿವಶಂಕರ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು, ಆದರೆ ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದ್ದಾರೆ. ಜರಗನಹಳ್ಳಿಯಲ್ಲಿ ಎಂಬಲ್ಲಿ 1949ರಲ್ಲಿ ಜನಿಸಿದ ಅವರು ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದುಕೊಂಡು, ಬ್ಯಾಂಕ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ಉದ್ಯೋಗದಲ್ಲಿ ಸ್ವಯಂ ನಿವೃತ್ತಿ ಪಡೆದು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.
ಸಾವಿರಕ್ಕೂ ಹೆಚ್ಚು ಹನಿಗವನವನ್ನು ರಚಿಸಿದ್ದಾರೆ, ಕಸಾಪದ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಕೀರ್ತಿ ಇವರಿಗೆ ತಲುಪುತ್ತದೆ ಜೊತೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿನಕರ ದೇಸಾಯಿ ಸಾಹಿತ್ಯ ಪ್ರಶಸ್ತಿ, ಸುವರ್ಣ ಕರ್ನಾಟಕ ಭೂಷಣ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!