ರಾಜ್ಯದಲ್ಲಿ ಲಾಕ್ ಡೌನ್ ಯಾವಾಗ?

428

Get real time updates directly on you device, subscribe now.

ಬೆಂಗಳೂರು: ಕೊರೊನಾ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಎರಡು ವಾರಗಳ ಕೊರೊನಾ ಕರ್ಫ್ಯೂ ವರ್ಕ್ಔಟ್ ಆಗಿಲ್ಲ.
ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡದಿದ್ದರೆ ಮುಂದಿನ ಚಿತ್ರಣ ಊಹಿಸಲು ಸಾಧ್ಯವಾಗದಷ್ಟು ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್ ಗಳು ಸಿಗುತ್ತಿಲ್ಲ, ಆಕ್ಸಿಜನ್ ಸಿಗುತ್ತಿಲ್ಲ. ಪರಿಸ್ಥಿತಿ ಇನ್ನೂ ಹೀಗೆ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ.
ಸಾರ್ವಜನಿಕರು ಕರ್ಫ್ಯೂ ನಿಯಮಗಳನ್ನು ಸರಿಯಾಗಿ ಪಾಲಿಸದ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಲಾಕ್ ಡೌನ್ ಮಾಡಬೇಕಾಗಿದೆ. ಈ ಬಗ್ಗೆ ಸಚಿವರ ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ನಿರ್ಧಾರ ತಿಳಿಸಲಾಗುವುದು ಎಂದಿದ್ದಾರೆ.

Get real time updates directly on you device, subscribe now.

Comments are closed.

error: Content is protected !!