ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2 ಅಲೆ ಹೆಚ್ಚಾಗುತ್ತಿರುವುದರಿಂದ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಗೆ ನಿರ್ಧರಿಸಿದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಮೇ 10 ರಿಂದ 24ವರೆಗೆ ಲಾಕ್ ಡೌನ್ ಜಾರಿಯಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.
ಸರ್ಕಾರಿ ಕಚೇರಿಗಳು ಬಾಗಶಃ ಕಾರ್ಯನಿರ್ವಹಿಸಲಿದೆ, ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ, ಅಂತರ್ ಜಿಲ್ಲೆ ಸಂಚಾರ ಬಂದ್ ಆಗಿರುತ್ತದೆ. ಕೈಗಾರಿಕೆ, ಪಬ್ ಗೆ ಅವಕಾಶವಿಲ್ಲ. ಹೊಟೇಲ್ ನಿಂದ ಪಾರ್ಸಲ್ ಗೆ ಮಾತ್ರ ಅವಕಾಶವಿರುತ್ತದೆ. ಮದ್ಯ ಮಾರಾಟಕ್ಕೆ ಅವಕಾಶವಿದ್ದು ಸಮಯ ನಿಗದಿಪಡಿಸಲಾಗಿದೆ. ಕಟ್ಟಡ ಕಾಮಗಾರಿಗಳಿಗೆ ಯಾವುದೇ ನಿರ್ಬಂಧವಿಲ್ಲ.
ಮಂದಿರ, ಮಸೀದಿ, ಚರ್ಚ್ ಗಳಿಗೆ ಪ್ರವೇಶಕ್ಕೆ ಅವಕಾಶವಿಲ್ಲ. ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ, ಕೃಷಿ ಸಂಬಂಧಿತ ವಸ್ತುಗಳ ಖರೀದಿಗೆ ಅವಕಾಶವಿರುತ್ತದೆ,
ದೈನಂದಿನ ಹಾಲು, ಹಣ್ಣು, ದಿನಸಿ ಖರೀದಿಗೆ ನಿಗದಿತ ಸಮಯದಲ್ಲೇ ಖರೀದಿಸಬೇಕಾಗಿರುತ್ತದೆ. ಅನಗತ್ಯವಾಗಿ ಸಾರ್ವಜನಿಕರು ಹೊರಗಡೆ ಕಾಲಿಟ್ಟರೆ ದಂಡ ತೆತ್ತಬೇಕಾಗುತ್ತದೆ.
Get real time updates directly on you device, subscribe now.
Next Post
Comments are closed.