ಆಕ್ಸಿಜನ್ ಸಿಲಿಂಡರ್ ಅಕ್ರಮ ದಾಸ್ತಾನು- ಆರೋಪಿಗಳ ಬಂಧನ

95

Get real time updates directly on you device, subscribe now.

ಕುಣಿಗಲ್: ಕೋವಿಡ್- 19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಗಳು ಆಕ್ಸಿಜನ್ ಸಿಲಿಂಡರ್ ಗಳನ್ನು ರೋಗಿಗಳ ಶುಶ್ರುಷೆಗಾಗಿ ಮೊದಲ ಆದ್ಯತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಗಳನ್ನು ಅಕ್ರಮ ದಾಸ್ತಾನು ಮಾಡಿರುವ ಬಗ್ಗೆ ಗುಪ್ತ ಮಾಹಿತಿ ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ತಾಲ್ಲೂಕಿನ ತರೀಕೆರೆ ಗ್ರಾಮದ ತಿರುಮಲ ಕ್ರಷರ್ ಬಳಿ ಹನುಮಂತ ಎಂಬ ವ್ಯಕ್ತಿಯು ಕೈಗಾರಿಕೆಗಾಗಿ ಬಳಸಲು ಆಕ್ಸಿಜನ್ ಸಿಲಿಂಡರ್ ಗಳನ್ನು ಇಟ್ಟುಕೊಂಡಿದ್ದಾನೆ ಎಂದು ಮಾಹಿತಿ ಬಂದ ಹಿನ್ನಲೆಯಲ್ಲಿ ಕುಣಿಗಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಜು ಡಿ.ಎಲ್ ನೇತೃತ್ವದಲ್ಲಿ ಕ್ರಷರ್ ಮೇಲೆ ದಾಳಿ ಮಾಡಿದಾಗ ಎರಡು ಆಕ್ಸಿಜನ್ ತುಂಬಿದ್ದ ಸಿಲಿಂಡರ್ ಪತ್ತೆಯಾಗಿವೆ.
ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ನರಸಿಂಹಮೂರ್ತಿ ಹಾಗೂ ಎಸ್ ಎಲ್ ವಿ ಟ್ರೇಡರ್ಸ್ನ ಉಸ್ತುವಾರಿ ನೋಡಿಕೊಳ್ಳುವ ವಸಂತಕುಮಾರ್ ಆಕ್ಸಿಜನ್ ಸಿಲಿಂಡರ್ ಗಳನ್ನು ಕ್ರಷರ್ ನ ಕೈಗಾರಿಕೋದ್ಯಮಕ್ಕಾಗಿ ದುಬಾರಿ ಹಣಕ್ಕಾಗಿ ಮಾರಾಟ ಮಾಡುತ್ತಿರುವುದು ವಿಚಾರಣೆ ವೇಳೆ ತಿಳಿದು ಬಂದ ಹಿನ್ನಲೆಯಲ್ಲಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡು, ಆರೋಪಿಗಳ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ- 2005 ರೀತ್ಯಾ ಪ್ರಕರಣ ದಾಖಲಿಸಲಾಗಿದೆ.
ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲು ಶ್ರಮಿಸಿದ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ವಂಶಿಕೃಷ್ಣ ಅಭಿನಂದಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!