ಸೋಂಕಿತರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ವ್ಯವಸ್ಥೆಗೆ ಕ್ರಮ

362

Get real time updates directly on you device, subscribe now.

ತುಮಕೂರು: ತುಮಕೂರು ನಗರ ಜಿಲ್ಲಾ ಕೇಂದ್ರವಾಗಿದ್ದು, ಅಕ್ಕ ಪಕ್ಕದ ಜಿಲ್ಲೆಯವರು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ ಸೋಕಿಂತರನ್ನು ದಾಖಲಾತಿ ಮಾಡುತ್ತಿರುವುದರಿಂದ ನಗರದ ಕೋವಿಡ್‌ ಸೋಕಿಂತರಿಗೆ ಆಸ್ಪತ್ರೆ ದಾಖಲಾತಿ ಸಿಗದೆ ಪರದಾಡುವ ಪರಿಸ್ಥಿತಿ ಉಂಟಾಗುತ್ತಿದೆ. ಪ್ರತಿನಿತ್ಯ ಕೋವಿಡ್‌ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದೆ ದೊಡ್ಡ ಕೆಲಸವಾಗಿದೆ. ಮಹಾನಗರ ಪಾಲಿಕೆ ಸದಸ್ಯರನ್ನು ಸಹ ಕೋವಿಡ್‌ ಸೋಂಕಿತರು ಆಸ್ಪತ್ರೆಯಲ್ಲಿ ದಾಖಲು ಮಾಡುವಂತೆ ಒತ್ತಡ ಹೇರುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ತುಮಕೂರು ನಗರದ ಕೋವಿಡ್‌ ಸೋಂಕಿತರಿಗೆ ಎ ಬಿ ಆರ್ ಕೆ ರೆಫರಲ್‌ ನೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುವುಂತಾಗಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು.
ಶಾಸಕರ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿ, ಕೋವಿಡ್‌ ಲಕ್ಷಣ ಕಂಡುಬಂದ ಕೂಡಲೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಂಡವರು ಗುಣಮುಖರಾಗುತ್ತಿದ್ದು, ತುಮಕೂರು ನಗರದ ಸೋಂಕಿತರಿಗೆ ಟೂಡಾ ಕ್ರೀಡಾ ಸಂಕೀರ್ಣದಲ್ಲಿ 200 ಹಾಸಿಗೆವುಳ್ಳ ಕೋವಿಡ್‌ ಕೇರ್‌ ಸೆಂಟರ್‌ ಜಿಲ್ಲಾಡಳಿತದ ವತಿಯಿಂದ ನಡೆಸಲಾಗುತ್ತಿದ್ದು, ದಾನಿಗಳು 40 ಆಕ್ಸಿಜನ್‌ ಕನ್ಸಟ್ರೆಟರ್‌ ನೀಡುತ್ತಿದ್ದು, ಟೂಡಾ ಕ್ರೀಡಾ ಸಂಕೀರ್ಣದಲ್ಲಿ ಆಗತ್ಯ ವ್ಯವಸ್ಥೆಗಳನ್ನು ಪುನಹ ಪರಿಶೀಲನೆ ಮಾಡುವಂತೆ, ದಾನಿಗಳು ಹಾಗೂ ಜಿಲ್ಲಾಡಳಿತದ ವತಿಯಿಂದ ರೇಣುಕಾ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಕೋವಿಡ್‌ ಸೆಂಟರ್‌, ಸಿದ್ದಗಂಗಾ ಮಠದ ಕೋವಿಡ್‌ ಸೆಂಟರ್ ಗಳಿಗೆ ಅಗತ್ಯ ಸೇವೆ ನೀಡುವಂತೆ ಶಾಸಕರು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಕೋವಿಡ್‌ ನಿಯಂತ್ರಣದ ಬಗ್ಗೆ ನಡೆಯುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಮೇಯರ್‌ ಬಿ.ಜಿ.ಕೃಷ್ಣಪ್ಪ, ಉಪಮೇಯರ್‌ ನಾಜೀಮಾ ಬಿ, ಟೂಡಾ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್‌ ಅಹಮದ್‌, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ಟೂಡಾ ಆಯುಕ್ತ ಯೋಗನಂದ್‌, ಪಾಲಿಕೆ ಆರೋಗ್ಯಧಿಕಾರಿ ಡಾ.ರಕ್ಷಿತ್‌ ಇದ್ದರು.

Get real time updates directly on you device, subscribe now.

Comments are closed.

error: Content is protected !!