ಕೊರೊನಾ ತಡೆಗೆ ಡೀಸಿಗಳ ಜೊತೆ ಪ್ರಧಾನಿ ಮೋದಿ ಸಂವಾದ

ಹಳ್ಳಿಗಳಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಿ

178

Get real time updates directly on you device, subscribe now.

ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್‌ ನಿಯಂತ್ರಣ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧಸ್ವಾಮಿ, ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಭಾಗವಹಿಸಿದ್ದರು.
ಈ ವೇಳೆ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಕೈಗೊಂಡಿರುವ ಮತ್ತು ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಸೇರಿದಂತೆ ಹಲವು ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕೋವಿಡ್‌- 19 ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಫೀಲ್ಡ್ ಕಮಾಂಡರ್ಸ್‌ ಎಂದು ಬಣ್ಣಿಸಿದರು. ಸ್ಥಳೀಯ ಕಂಟೈನ್‌ಮೆಂಟ್‌ ವಲಯ, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ.
9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ, ತಮ್ಮ ಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಹೊಸ ವಿಧಾನ ಅನುಸರಿಸಲು ಅವರು ಮುಕ್ತರಾಗಿರುತ್ತಾರೆ, ನೀತಿಯಲ್ಲಿ ಯಾವುದೇ ಬದಲಾವಣೆ ಬಗ್ಗೆ ಯಾವುದೇ ಪ್ರತಿಬಂಧವಿಲ್ಲದೆ ಮುಕ್ತವಾಗಿ ಪ್ರತಿಕ್ರಿಯೆ ಹಂಚಿಕೊಳ್ಳುವಂತೆ ಸೂಚಿಸಿದರು.
ಕೋವಿಡ್‌- 19 ವಿರುದ್ಧದ ಹೋರಾಟದಲ್ಲಿ ಲಸಿಕೆ ಬಲವಾದ ಮಾರ್ಗವಾಗಿದೆ, ಅದರ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಒಟ್ಟಾಗಿ ಹೋಗಲಾಡಿಸಬೇಕಾಗಿದೆ, ದೊಡ್ಡ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ, ಸಿದ್ಧತೆಗೆ ಅವಕಾಶ ಮಾಡಿಕೊಡಲು ಲಸಿಕಾ ಕಾರ್ಯಕ್ರಮಕ್ಕೂ 15 ದಿನ ಮುಂಚಿತವಾಗಿ ರಾಜ್ಯಗಳಿಗೆ ಲಸಿಕೆ ಪೂರೈಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಸೋಂಕು ಪರೀಕ್ಷೆ, ಪತ್ತೆ, ಚಿಕಿತ್ಸೆ ಹಾಗೂ ಕೋವಿಡ್‌ ಸೂಕ್ತ ನಡವಳಿಕೆಗಳು ಸೋಂಕು ಹರಡಂತೆ ಪರಿಶೀಲಿಸುವ ಪ್ರಮುಖ ಅಂಶಗಳಾಗಿವೆ, ಕೋವಿಡ್‌ ಪಾಸಿಟಿವ್‌, ಕುಟುಂಬದ ಕೆಲ ಸದಸ್ಯರನ್ನು ಕಳೆದುಕೊಂಡರೂ ಅದ್ಯಾವುದನ್ನು ಲೆಕ್ಕಿಸದೆ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಹೊಗಳಿದರು.
ಸಾಂಕ್ರಾಮಿಕದ ಎರಡನೇ ಅಲೆ ವೇಳೆಯಲ್ಲಿ ಗ್ರಾಮೀಣ ಮತ್ತು ಸಂಪರ್ಕಕ್ಕೆ ಸಿಗದ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸುವಂತೆ ಸೂಚನೆ ನೀಡಿದರು.
ವೀಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್‌ ಬಾಬು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!