ಕೊರೊನಾಗೆ ಗ್ರಾಪಂ ಸದಸ್ಯ ನಿಧನ

403

Get real time updates directly on you device, subscribe now.

ಮಧುಗಿರಿ: ಕೊರೊನಾ ಸೋಂಕಿನಿಂದ ಗ್ರಾಪಂ ಸದಸ್ಯ ಸಿದ್ದಣ್ಣ (58) ಮೃತಪಟ್ಟಿದ್ದಾರೆ.
ತಾಲೂಕಿನ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಗೊಲ್ಲರಹಟ್ಟಿ ಗ್ರಾಮದ ಸಿದ್ದಣ್ಣ ಕಳೆದ ಹತ್ತು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಧುಗಿರಿಯ ಮುಸ್ಲಿಂ ಸಮುದಾಯದ ಸ್ವಯಂ ಸೇವಕರ ತಂಡವು ಕೋವಿಡ್‌ ನಿಯಮದಂತೆ ಗ್ರಾಮ ಪಂಚಾಯತಿ ವತಿಯಿಂದ ಅಂತ್ಯ ಸಂಸ್ಕಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಕುಟುಂಬ ವರ್ಗ ಹಾಗೂ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ರಜನಿ ಹಾಜರಿದ್ದು ಅಂತಿಮ ಸಂಸ್ಕಾರ ನೆರವೇರಿಸಿದರು.

Get real time updates directly on you device, subscribe now.

Comments are closed.

error: Content is protected !!