ಕುಣಿಗಲ್: ತಾಲೂಕಿನ ಇಪ್ಪಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ವಿ ಎಸ್ ಎಸ್ ಎನ್ ಹಾಲಿ ಅಧ್ಯಕ್ಷ ಐ.ಜಿ.ರಮೇಶ್ (57) ಮಾರಕ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ.
ಐಜಿ ಎಂದೆ ಖ್ಯಾತರಾಗಿದ್ದ ಇಪ್ಪಾಡಿ ಗ್ರಾಮದ ಐ.ಜಿ.ರಮೇಶ್ ಇಪ್ಪಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ, ಹಾಲಿ ವಿ ಎಸ್ ಎಸ್ ಎನ್ ಅಧ್ಯಕ್ಷರಾಗಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಬಹುವಾಗಿ ಶ್ರಮಿಸಿದ್ದಾರೆ. ಮೃತರು ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಮೃತರು ಮೂಲತಹ ಕಾಂಗ್ರೆಸ್ ಕಟ್ಟಾಳುವಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಶ್ರಮಿಸಿದ್ದಲ್ಲದೆ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ವಿ ಎಸ್ ಎಸ್ ಎನ್ ಅಧ್ಯಕ್ಷರಾಗಿ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡುವುದರ ಜೊತೆಗೆ ಸಂಘವು ಲಾಭದಾಯಕವಾಗುವ ಜೊತೆಯಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ಸಂಘದ ಸದಸ್ಯರಿಗೆ ಸರ್ಕಾರದ ಸವಲತ್ತು ದೊರಕಿಸಿಕೊಡಲು ಬಹುವಾಗಿ ಶ್ರಮಿಸಿದ್ದರು. ಕಳೆದ ಕೆಲ ದಿನಗಳ ಹಿಂದೆ ಕೊವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಶಾಸಕ ಡಾ.ರಂಗನಾಥ್, ತಾಪಂ ಮಾಜಿ ಸದಸ್ಯ ವಿಶ್ವನಾಥ, ಮುಖಂಡ ಕೆಂಪೀರೆಗೌಡ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಅವರ ಜಮೀನಿನಲ್ಲಿ ನೆರವೇರಿಸಲಾಯಿತು.
ಬ್ಲಾಕ್ ಫಂಗಸ್ ಗೆ ರಮೇಶ್ ಬಲಿ
Get real time updates directly on you device, subscribe now.
Prev Post
Comments are closed.