ಸೋಂಕಿತರು ಕೇರ್ ಸೆಂಟರ್ ಗೆ ದಾಖಲಾಗಿ: ಲಕ್ಷ್ಮಣ್

281

Get real time updates directly on you device, subscribe now.

ಶಿರಾ: ಕೋವಿಡ್ ಸೋಂಕು ದೃಡಪಟ್ಟ ಎಲ್ಲಾ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಲು ಗ್ರಾಮ ಪಂಚಾಯಿತಿ ಟಾಸ್ಕ್ ಪೋಸ್ ಸಮಿತಿಯ ಎಲ್ಲ ಸದಸ್ಯರು ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇಓ ಲಕ್ಷ್ಮಣ್ ತಿಳಿಸಿದರು.
ತಾಲ್ಲೂಕಿನ ಹಂದಿಕುಂಟೆ, ಕೊಟ್ಟ, ಹೊನ್ನಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಮಂಗಳವಾರ ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಪಂ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಕೋವಿಡ್- 19 ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಗ್ರಾಮಗಳಲ್ಲಿ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಹಾಗೂ ಹೋಂ ಐಸೋಲೇಶನ್ನಲ್ಲಿ ಇರುವವರು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ನಿಗಾ ವಹಿಸಬೇಕು. ಅನಗತ್ಯವಾಗಿ ಸಾರ್ವಜನಿಕರು ಮನೆಯಿಂದ ಹೊರಬಂದು ಓಡಾಡುವುದನ್ನು ನಿಲ್ಲಿಸುವುದು ಬೇರೆ ಬೇರೆ ಗ್ರಾಮಗಳಿಗೆ ಹೋಗಿ ಬರದಂತೆ ತಿಳಿ ಹೇಳಬೇಕು, ಬೆಂಗಳೂರು ಮತ್ತಿತರ ಕಡೆಗಳಿಂದ ಬಂದಿರುವವರು ಕಡ್ಡಾಯವಾಗಿ 14 ದಿನಗಳ ಕಾಲ ಮನೆಯಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಹೊನ್ನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಮಾಸ್ಕ್, ಸ್ಯಾನಿಟೈಜರ್ ವಿತರಿಸಲಾಯಿತು ಹಾಗೂ ಪಾಸಿಟಿವ್ ಪ್ರಕರಣ ದೃಢಪಟ್ಟ ಕುಟುಂಬಗಳಿಗೂ ಸಹ ಮಾಸ್ಕ್ ಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ವಿತರಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!