ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಕೋವಿಡ್ ಲಸಿಕಾ ಕೇಂದ್ರಗಳನ್ನು ಪ್ರಾರಂಭಿಸಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಲಸಿಕೆ ನೀಡುವಂತೆ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಶಾಸಕರ ಕಚೇರಿಯಲ್ಲಿ ಕೋವಿಡ್ ಲಸಿಕೆಗೆ ಸಂಬಂಧಪಟ್ಟಂತೆ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕರು ತುಮಕೂರು ನಗರದ ಎಲ್ಲೆಡೆ ಲಸಿಕೆ ವ್ಯವಸ್ಥೆ ಮಾಡಲು ಸೂಚನೆ ನೀಡಿ, ಜನ ಸಂದಣಿಯಾಗದಂತೆ ಮಹಾನಗರ ಪಾಲಿಕೆಯಿಂದ ಕೋವಿಡ್ ಲಸಿಕಾ ಕೇಂದ್ರಗಳನ್ನು ವ್ಯವಸ್ಥೆ ಮಾಡಿ ಮಹಾನಗರ ಪಾಲಿಕೆಯಲ್ಲಿ ನೋಂದಾಯಸಿಕೊಂಡಿರುವ ಸ್ವಯಂ ಸೇವಕರನ್ನು ಬಳಸಿಕೊಂಡು ಲಸಿಕಾ ಕೇಂದ್ರಗಳನ್ನು ಪ್ರಾರಂಭಿಸಿ, ನಗರದ ಹಲವು ಭಾಗಗಳಲ್ಲಿ ಇದುವರೆಗೂ ಕೋವಿಡ್ ಲಸಿಕೆ ತೆಗೆದುಕೊಳ್ಳದೆ ಇರುವುದು ನನ್ನ ಗಮನಕ್ಕೆ ಬಂದಿದೆ, ಶೀಘ್ರವಾಗಿ ಪಿ.ಹೆಚ್.ಕಾಲೋನಿ, ಹೆಗಡೆ ಕಾಲೋನಿ, ಜಯಪುರ ಈ ಭಾಗಗಳಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ಪ್ರಾರಂಭಿಸಿ, ಬಡ ಹಾಗೂ ಕಾರ್ಮಿಕ ವರ್ಗದವರ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ತುಮಕೂರು ನಗರಕ್ಕೆ ಪ್ರತಿನಿತ್ಯ 1 ಸಾವಿರದಿಂದ ಒಂದುವರೆ ಸಾವಿರವರೆಗೂ ಲಸಿಕೆ ಪೂರೈಕೆಯಾಗುತ್ತಿದ್ದು, ಮಹಾನಗರ ಪಾಲಿಕೆ ಸದಸ್ಯರು ತಮ್ಮ ವಾರ್ಡ್ ಗಳಲ್ಲಿ ಆಸಕ್ತಿ ವಹಿಸಿ ಸಾರ್ವಜನಿಕರಗೆ ಲಸಿಕೆ ಕೊಡಿಸುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ಡಿಸೆಂಬರ್ ವರೆಗೂ ಲಸಿಕೆ ಕೊಡುವ ಕೆಲಸ ನಿರಂತರವಾಗಿ ನಡೆಯಲಿದೆ ಹಾಗೂ ದಾಸ್ತಾನುಗೆ ತಕ್ಕಂತೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್ ಅಹಮದ್, ಸದಸ್ಯ ವಿಷ್ಣುವರ್ಧನ್, ಆಯುಕ್ತರಾದ ರೇಣುಕಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮೋಹನ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ರಕ್ಷಿತ್ ಹಾಗೂ ಮುಖಂಡ ಉಬೇದುಲ್ಲಾ ಇದ್ದರು.
ಹೆಚ್ಚು ಲಸಿಕಾ ಕೇಂದ್ರ ತೆರೆಯಲು ಶಾಸಕರ ಸೂಚನೆ
Get real time updates directly on you device, subscribe now.
Next Post
Comments are closed.