83 ಗ್ರಾಮಗಳ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ನಿರ್ಣಯ

106

Get real time updates directly on you device, subscribe now.

ತುಮಕೂರು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಈ ಸಭೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ ಮಿಷನ್‌ ಯೋಜನೆಯಡಿ ಜಿಲ್ಲೆಯಲ್ಲಿ 7 ಬಹುಗ್ರಾಮ ಕುಡಿಯುವ ಯೋಜನೆ ಮೂಲಕ 83 ಸುಸ್ಥಿರ ಜಲಮೂಲ ಹೊಂದಿರುವ ಗ್ರಾಮಗಳ ಪ್ರತಿ ಮನೆ ಮನೆಗೂ 24*7 ನೀರು ಒದಗಿಸಲು ಕಾರ್ಯಾತ್ಮಕವಾಗಿ ನಲ್ಲಿ ಅಳವಡಿಕೆಗಾಗಿ ಕ್ರಿಯಾ ಯೋಜನೆಗೆ ಒಪ್ಪಿಗೆ ತೆಗೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು.
ನಂತರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜಲ ಜೀವನ್‌ ಮಿಷನ್‌ ಯೋಜನೆಯಡಿ ನಲ್ಲಿ ಅಳವಡಿಕೆಗೆ ಗುರುತಿಸಿರುವ ಹಳ್ಳಿಗಳಲ್ಲಿ ಶೇ.100 ರಷ್ಟು ನಳ ಅಳವಡಿಸಬೇಕು, ನಮ್ಮ ಮನೆಗೆ ನಲ್ಲಿ ಅಳವಡಿಸಿಲ್ಲ ಎಂಬ ದೂರು ಕೇಳಿ ಬರದಂತೆ ಪ್ರತಿ ಮನೆಗೂ ನಲ್ಲಿ ಅಳವಡಿಕೆ ಕಾರ್ಯ ಯಶಸ್ವಿಯಾಗಬೇಕು ಎಂದು ಇಂಜಿನಿಯರ್ ಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ನೀರಿನ ಮೂಲ ಹೆಚ್ಚಿಸಬೇಕು, ಆ ನಿಟ್ಟಿನಲ್ಲಿ ಜಿಲ್ಲೆಯ ಕೆರೆಗಳ ಪುನರುಜ್ಜೀವನ ಕಾರ್ಯಕ್ರಮಕ್ಕೂ ಹೆಚ್ಚಿನ ಆದ್ಯತೆ ಕೊಡಬೇಕು, ನೀರಿನ ಮಟ್ಟ ವೃದ್ಧಿಯಾದರೆ ಜಲಮೂಲ ಲಭ್ಯವಾಗಲಿದೆ ಎಂದರು.
ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್‌ ಮಾತನಾಡಿ, ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ಕಾರ್ಯಾತ್ಮಕ ನಲ್ಲಿ ಸಂಪರ್ಕ ಕಲ್ಪಿಸುವ ಮೂಲಕ ಸುರಕ್ಷಿತ ಕುಡಿಯುವ ನೀರು ಒದಗಿಸುವ ಮಹತ್ತರ ಉದ್ದೇಶದೊಂದಿಗೆ ಜಲಜೀವನ್‌ ಮಿಷನ್‌ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆ ಯಾವ ಕಾರಣಕ್ಕೂ ವಿಫಲವಾಗದಂತೆ ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕೆ.ಮುತ್ತಪ್ಪ ಹಾಗೂ ಸಹಾಯಕ ಅಭಿಯಂತರ ಮಮತಾ ಮಾತನಾಡಿ, ಜಿಲ್ಲೆಯಲ್ಲಿ 7 ಬಹು ಗ್ರಾಮ ಕುಡಿಯುವ ನೀರು ಯೋಜನೆ ಮೂಲಕ ಯಾವ್ಯಾವ ಗ್ರಾಮಗಳಿಗೆ ಎಷ್ಟೆಷ್ಟು ನಲ್ಲಿ ಅಳವಡಿಸಲಾಗುವುದು. ಸುಸ್ಥಿರ ನೀರಿನ ಮೂಲ ಹೇಗೆ ಎಂಬುದರ ವರದಿಯನ್ನು ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು, ಒಂದೊಂದೇ ಗ್ರಾಮಗಳ ಜಲಮೂಲ ಮತ್ತು ನಲ್ಲಿ ಅಳವಡಿಕೆ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿ ನಿರ್ಣಯ ತೆಗೆದುಕೊಂಡರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ, ಕೃಷಿ ಜಂಟಿ ಕೃ ನಿರ್ದೇಶಕಿ ರಾಜಸುಲೋಚನಾ, ತುಮಕೂರು ಭಾಗೀಯ ಅರಣ್ಯಾಧಿಕಾರಿ ಡಿ.ಎನ್‌.ನಾಗರಾಜು, ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರುಣ್‌ ಇದ್ದರು.

Get real time updates directly on you device, subscribe now.

Comments are closed.

error: Content is protected !!