ತುಮಕೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಸಿ ನೆಟ್ಟು ನೀರುಣಿಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ಸೋಂಕು ಇರುವುದರಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಜಿಲ್ಲಾದ್ಯಂತ ಗಿಡಗಳನ್ನು ನೆಟ್ಟು ಹಸಿರನ್ನು ಬೆಳೆಸಿ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಮಕ್ಕಳಲ್ಲಿ ಮರ ಗಿಡಗಳನ್ನು ಬೆಳೆಸುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಲು ಸಾಧ್ಯ ವಾಗುತ್ತದೆ ಎಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ, ಉಪ ವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮೋಹನ್ ಮತ್ತಿತರರು ಹಾಜರಿದ್ದರು.
ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ
Get real time updates directly on you device, subscribe now.
Comments are closed.