ರಾಹುಲ್ ಕುಮಾರ್ ಶಹಾಪುರ್ ವಾಡ್ ತುಮಕೂರು ನೂತನ ಎಸ್ಪಿ

408

Get real time updates directly on you device, subscribe now.

ತುಮಕೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತುಮಕೂರು ಎಸ್ ಪಿ ಡಾ.ಕೋನ ವಂಶಿಕೃಷ್ಣ ಅವರನ್ನು ವರ್ಗವಣೆ ಮಾಡಲಾಗಿದೆ.
ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಹುಲ್ ಕುಮಾರ್ ಶಹಾಪುರ್ ವಾಡ್ ಅವರು ತುಮಕೂರು ಜಿಲ್ಲಾ ಎಸ್ ಪಿ ಯಾಗಿ ಆಗಮಿಸಿದ್ದಾರೆ.
ಡಾ.ವಂಶಿಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಮಹಾರಾಷ್ಟ್ರ ಮೂಲದ ರಾಹುಲ್ ಕುಮಾರ್ ಶಹಾಪುರ್ ವಾಡ್ (2012 ಬ್ಯಾಚ್) ಅವರು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಹಾಸನದಲ್ಲಿ ಎಸ್ಪಿಯಾಗಿದ್ದರು, ಖಡಕ್ ಅಧಿಕಾರಿಯಾಗಿದ್ದ ಇವರನ್ನು ಕುಮಾರಸ್ವಾಮಿ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು, ಇವರ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಯೂ ವ್ಯಕ್ತವಾಗಿತ್ತು.

Get real time updates directly on you device, subscribe now.

Comments are closed.

error: Content is protected !!