ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ

ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಮುಖಿ

517

Get real time updates directly on you device, subscribe now.

ತುಮಕೂರು: ಕೇಂದ್ರ ಸರಕಾರ ಇಂಧನ ಬೆಲೆಗಳನ್ನು ನಿರಂತರವಾಗಿ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿರುವುದನ್ನು ವಿರೋಧಿಸಿ, ಕಾಂಗ್ರೆಸ್‌ ಪಕ್ಷ ಕರೆ ನೀಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು, ವಿವಿಧ ಮಂಚೂಣಿ ಘಟಕಗಳ ಮುಖಂಡರು ಪೆಟ್ರೋಲ್‌ ಬಂಕ್ ಗಳ ಎದುರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆಯಲ್ಲಿ ಮಾಜಿ ಶಾಸಕ ಡಾ.ರಫಿಕ್‌ ಅಹಮದ್‌ ಮಾತನಾಡಿ, ಭಾರತದ ಜನರಿಗೆ ಅಚ್ಚೆ ದಿನದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಕಾರ್ಪೋರೇಟ್‌ ಪರ ನೀತಿಗಳಿಂದಾಗಿ ಜನಸಾಮಾನ್ಯರು ಬೆಲೆ ಹೆಚ್ಚಳದಿಂದ ಪರದಾಡುವಂತಾಗಿದೆ, 2014ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದ್ದರೂ, ಜನಸಾಮಾನ್ಯರ ಮೇಲೆ ಅತಿ ಕಡಿಮೆ ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರಿಗೆ ಕೈಗೆಟುವ ದರದಲ್ಲಿ ಪೆಟ್ರೋಲ್‌, ಡೀಸೆಲ್‌ ಸಿಗುವಂತೆ ಮಾಡಿದ್ದರು. ಆದರೆ ಇಂದಿನ ಸರಕಾರ ಅತಿಯಾದ ಸೆಸ್‌ ವಿಧಿಸುವ ಮೂಲಕ 100 ರೂ. ತಲುಪುವಂತೆ ಮಾಡಿದ್ದಾರೆ, ಇದರ ಫಲವಾಗಿ ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ ಹೆಚ್ಚಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ ಎಂದರು.
ದೇಶದಲ್ಲಿ ತೈಲದ ಮೂಲ ಬೆಲೆ 33 ರೂ. ಇದೆ, ಆದರೆ ಇದರ ಜೊತೆಗೆ 3.60 ಪೈಸ್‌ ಶುದ್ಧೀಕರಣ ಬೆಲೆ, 32.90 ರೂ. ಎಕ್ಸೇಜ್‌ ಟ್ಯಾಕ್ಸ್ ಹಾಗೂ ಶೇ.30 ರಷ್ಟು ವ್ಯಾಟ್‌ ಸೇರಿ ಇಂದು ನೂರು ರೂ. ತಲುಪಿದೆ. ಕೇಂದ್ರ ಸರಕಾರ ಅತಿಯಾದ ಸೆಸ್‌ ಕಡಿಮೆ ಮಾಡುವ ಮೂಲಕ ಪೆಟ್ರೋಲ್‌, ಡೀಸೆಲ್‌ ಕಡಿಮೆ ಬೆಲೆಗೆ ದೊರೆಯುವಂತೆ ಮಾಡಬೇಕೆಂಬುದು ಕಾಂಗ್ರೆಸ್‌ ಪಕ್ಷದ ಈ ಪ್ರತಿಭಟನೆಯ ಮೂಲ ಉದ್ದೇಶವಾಗಿದೆ ಎಂದು ಡಾ.ರಫಿಕ್‌ ಅಹಮದ್‌ ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ, ಮಾಜಿ ಶಾಸಕರಾದ ಆರ್‌.ನಾರಾಯಣ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಆಟೋ ರಾಜು, ಮೆಹಬೂಬ್‌ ಪಾಷ, ಸಂಜೀವ್‌ಕುಮಾರ್‌, ಮಂಚೂಣಿ ಘಟಕಗಳ ಅಧ್ಯಕ್ಷರಾದ ಬಿ.ಜಿ.ನಿಂಗರಾಜು, ಪುಟ್ಟರಾಜು, ಪಾಲಿಕೆ ಸದಸ್ಯ ನಯಾಜ್‌ ಅಹಮದ್‌, ಹಿರಿಯ ಉಪಾಧ್ಯಕ್ಷರಾದ ಹೆಚ್‌.ಸಿ.ಹನುಮಂತಯ್ಯ, ರೇವಣ್ಣ ಸಿದ್ದಯ್ಯ, ಸುಜಾತ, ನಾಗಮಣಿ, ಮಂಗಳ, ಮಂಜುನಾಥ್‌, ಕಾರ್ಮಿಕ ಘಟಕದ ಸೈಯದ್‌ ದಾದಾಪೀರ್‌, ಅಬ್ದುಲ್‌ ರಹೀಂ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!