ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ: ಜ್ಯೋತಿಗಣೇಶ್

569

Get real time updates directly on you device, subscribe now.

ತುಮಕೂರು: ನಗರದಲ್ಲಿ ಆಶ್ರಯ ಮನೆ ಯೋಜನೆಯಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇ ಹಿಂದೆ ಅವಕಾಶ ಕಲ್ಪಿಸಲಾಗಿತ್ತು. ಸದರಿಯವರು 22 ಸಾವಿರಕ್ಕೂ ಹೆಚ್ಚು ಆನ್ ಲೈನ್‌ ಅರ್ಜಿ ಸಲ್ಲಿಸಲಾಗಿತ್ತು. ಇದರಲ್ಲಿ 4 ಸಾವಿರ ಅರ್ಜಿಗಳು ಮಾತ್ರ ಅರ್ಹವಾಗಿರುತ್ತದೆ. ಮತ್ತೊಂದೆಡೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮಗೂ ಅರ್ಜಿ ಸಲ್ಲಿಸಲು ಅವಕಾಶ ಕೊಡಿ, ನಾವು ಅರ್ಹರು ಎಂದು ನೂರಾರು ಸಾರ್ವಜನಿಕರು ನನ್ನ ಬಳಿ ಬಂದು ಅಳಲು ತೋಡಿಕೊಂಡಿದ್ದಾರೆ. ಈ ಕಾರಣದಿಂದ ಈ ಸಭೆಯ ನಿರ್ಣಯದಂತೆ ಮತ್ತೊಮ್ಮೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲು ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು.
ನಗರದ ತಮ್ಮ ಶಾಸಕ ಕಚೇರಿಯಲ್ಲಿ ನಗರ ಆಶ್ರಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಮಕೂರು ನಗರದಲ್ಲಿ ಸೈಟ್‌ ಹಂಚಿಕೆ ಮಾಡಲು ಸಾಧ್ಯವಿಲ್ಲ, ಸರ್ಕಾರಿ ಜಮೀನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಜಿ+2 ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ 4 ಕಡೆ ಸರ್ಕಾರಿ ಜಮೀನು ಗುರುತಿಸಲಾಗಿದ್ದು, ಸರ್ಕಾರಿ ಜಮೀನುಗಳಿಗೆ ಜಿಪಿಎಸ್‌ ಕೋ- ಆರ್ಡಿನೇಟರ್‌ ಸರ್ವೆ ನಡೆಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಮೇಯರ್‌ ಬಿ.ಜಿ.ಕೃಷ್ಣಪ್ಪ, ಆಯುಕ್ತೆ ರೇಣುಕಾ, ಸ್ಮಾರ್ಟ್‌ಸಿಟಿ ಎಂಡಿ ರಂಗಸ್ವಾಮಿ, ತಹಶೀಲ್ದಾರ್‌ ಮೋಹನ್‌, ಸರೋಜಗೌಡ, ವಿಜಯ್‌ ಪ್ರಕಾಶ್‌.ಎನ್‌.ಡಿ, ಸಿದ್ದಗಂಗಯ್ಯ, ಸ್ಲಂ ಬೋರ್ಡ್ ನ ಎಇಇ ಲೋಕೇಶ್ವರಪ್ಪ ಹಾಗೂ ಪಾಲಿಕೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Get real time updates directly on you device, subscribe now.

Comments are closed.

error: Content is protected !!