ಕುಣಿಗಲ್: ರೈತಾಪಿ ಜನತೆಗೆ ಹತ್ತಿರವಾಗಿರುವ ಇಲಾಖೆಗಳು ಸರ್ಕಾರದ ಸವಲತ್ತುಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಅಗತ್ಯ ದಾಖಲೆ ಪಡೆದು ರೈತರಿಗೆ ನೆರವಾಗುವ ಮೂಲಕ ರೈತರ ಆರ್ಥಿಕ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿಬೇಕೆಂದು ಶಾಸಕ ಡಾ.ರಂಗನಾಥ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ, ರೈತರ ನೆರವಿಗಾಗಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳಿವೆ. ಆದರೂ ರೈತರಿಗೆ ಸಕಾಲದಲ್ಲಿ ಯೋಜನೆಗಳು ನಿರೀಕ್ಷಿತ ರೀತಿಯಲ್ಲಿ ತಲುಪುತ್ತಿಲ್ಲ, ಇದಕ್ಕೆ ಕಾರಣ ಏನೆಂಬುದನ್ನು ಇಲಾಖೆ ಅಧಿಕಾರಿಗಳು ಮನಗಾಣಬೇಕು, ಸರ್ಕಾರದ ಯೋಜನೆಗಳು ರೈತರ ಆರ್ಥಿಕತೆ ವೃದ್ಧಿಗೆ ಪೂರಕವಾಗಿದೆ. ಆದರೆ ಯೋಜನೆಗಳ ಬಗ್ಗೆ ರೈತರಲ್ಲಿ ವ್ಯಾಪಕ ಅರಿವು ಮೂಡಿಸುವಂತಾಗಬೇಕು. ಅರಿವು ಮೂಡಿಸುವ ಜೊತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ ನಿಗದಿತ ಸಮಯದಲ್ಲಿ ರೈತನಿಗೆ ಸರ್ಕಾರದ ಸವಲತ್ತಿನ ನೆರವು ನೀಡಬೇಕಿದೆ. ಬದಲಾದ ಆಧುನಿಕತೆಗೆ ತಕ್ಕಂತೆ ರೈತರಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು, ಜಾಗತಿಕ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸಾಮರ್ಥ್ಯ ವೃದ್ಧಿಸಬೇಕಿದೆ. ಪಶುಸಂಗೋಪನ ಇಲಾಖೆಯವರು ರಾಸುಗಳ ಸಂರಕ್ಷಣೆ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ 80 ಕ್ಕೂ ಹೆಚ್ಚು ರಾಸುಗಳು ಮೃತಪಟ್ಟಿರುವುದು ಆತಂಕಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಹಾಯಕ ಕೃಷಿ ನಿರ್ದೇಶಕಿ ಸೌಮ್ಯಶ್ರೀ, ತೋಟಗಾರಿಕೆ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಕೃಷಿ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಿಸಿದರು.
ಸರ್ಕಾರದ ಸೌಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ: ರಂಗನಾಥ್
Get real time updates directly on you device, subscribe now.
Next Post
Comments are closed.