ಜು.24ಕ್ಕೆ ಕಾಂಗ್ರೆಸ್ ಮುಖಂಡರ ಸಭೆ, ಪಕ್ಷ ಸಂಘಟನೆಗೆ ಒತ್ತು: ಸಲೀಂ ಅಹಮದ್

ಕೇಂದ್ರ, ರಾಜ್ಯದಲ್ಲಿ ಆಯೋಗ್ಯರ ಆಡಳಿತ

273

Get real time updates directly on you device, subscribe now.

ತುಮಕೂರು: ಪಕ್ಷ ಸಂಘಟನೆಯ ಉದ್ದೇಶದಿಂದ ಐದು ದಿನ ರಾಜ್ಯದ ಪ್ರವಾಸ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿರಣದೀಪ್ ಸುರ್ಜೆವಾಲ್ ಅವರು ಜು. 24 ರಂದು ತುಮಕೂರು ವಿಭಾಗದ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ಮತ್ತು ಸಂವಾದ ನಡೆಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹಮದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜುಲೈ 23 ರಿಂದ 30 ರವರೆಗೆ ಕರ್ನಾಟಕ ಐದು ಕಡೆ ವಿಭಾಗೀಯ ಮಟ್ಟದಲ್ಲಿ ಮುಖಂಡರುಗಳೊಂದಿಗೆ ಸಭೆ ನಡೆಸಿ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಪರಿಷತ್ ಚುನಾವಣೆಗಳ ಜೊತಗೆ, ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದರು.
ಜು.24 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗು ಹೆಚ್.ಎಂ.ಟಿ ಕಾರ್ಖಾನೆಯ ಪಕ್ಕದಲ್ಲಿರುವ ಹರ್ಬನ್ ರೇಸಾರ್ಟ್ನಲ್ಲಿ ತುಮಕೂರು,ಚಿತ್ರದುರ್ಗ,ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪಕ್ಷದ ಮಂಚೂಣಿ ಘಟಕಗಳ ಅಧ್ಯಕ್ಷರುಗಳು ಸೇರಿ 150ಕ್ಕೂ ಹೆಚ್ಚು ಮುಖಂಡರ ಜೊತೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಿದ್ದಾರೆ.ಅಲ್ಲದೆ ಮುಖಂಡ ಅಭಿಪ್ರಾಯವನ್ನು ಸಂಗ್ರಹಿಸಲು ಸಂವಾದ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರು, ಕೆಪಿಸಿಸಿ ಮಾಜಿ ಅಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸದಸ್ಯರು, ಐದು ಜಿಲ್ಲೆಗಳ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಸಲೀಂ ಆಹಮದ್ ತಿಳಿಸಿದರು.
ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಯಡಿಯೂರಪ್ಪ ಅಧಿಕಾರದಲ್ಲಿ ಇದ್ದಷ್ಟು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದು. ಇವರ ಜನವಿರೋಧಿ ನೀತಿಯಿಂದ ಜನರು ಮತ್ತಷ್ಟು ಬೇಸತ್ತು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಲಿದ್ದಾರೆ. ಕೋರೋನದಂತಹ ಸಂಕಷ್ಟ ಕಾಲದಲ್ಲಿ ಜನರ ಪರ ನಿಲ್ಲಬೇಕಾದ ಮುಖ್ಯಮಂತ್ರಿಗಳು ಭಷ್ಟ್ರಾಚಾರದಲ್ಲಿ ತೊಡಗಿ, ಜನಸಾಮಾನ್ಯರು ಹಸಿವಿನಿಂದ ಭಿಕ್ಷೆ ಬೇಡುವಂತಹ ಸ್ಥಿತಿಗೆ ತಂದಿಟ್ಟಿದ್ದಾರೆ. ಇಂತಹ ಬಲಹೀನ, ಅಧಕ್ಷ ಸರಕಾರ ಅಧಿಕಾರದಿಂದ ಕೆಳಗೆ ಇಳಿಯುವುದೇ ಲೇಸು ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಡಾ.ರಂಗನಾಥ್, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್, ಎಸ್.ಷಪಿ ಅಹಮದ್, ಆರ್.ನಾರಾಯಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಕೌಶಲ್ಯಾ ಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ಆರ್.ರಾಜೇಂದ್ರ, ಹೊನ್ನಗಿರಿಗೌಡ, ವಿ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!