ಸಾಧನೆಗಳ ಸರಮಾಲೆ ಕಿರುಹೊತ್ತಿಗೆ ಬಿಡುಗಡೆ

417

Get real time updates directly on you device, subscribe now.

ತುಮಕೂರು: ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು ಜುಲೈ 26ಕ್ಕೆ ಎರಡು ಸಾರ್ಥಕ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸಿದ್ಧಪಡಿಸಿದ ಸಾಧನೆಗಳ ಸರಮಾಲೆ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ದಿವಾಕರ್, ಇದ್ದರು.
ಜಿಲ್ಲೆಯಲ್ಲಿ ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿಯೂ ಕಳೆದ ಎರಡು ವರ್ಷಗಳಲ್ಲಿ ಸರ್ಕಾರ ಕೈಗೆತ್ತಿಕೊಂಡ ಜನಪರ ಕಾರ್ಯಕ್ರಮ, ವಿವಿಧ ಇಲಾಖೆಗಳ ಪ್ರಗತಿ ಸಾಧನೆಗಳ ಮಾಹಿತಿ ಈ ಕಿರುಹೊತ್ತಿಗೆ ಒಳಗೊಂಡಿದೆ.

Get real time updates directly on you device, subscribe now.

Comments are closed.

error: Content is protected !!