ಕೊರಟಗೆರೆ: ಕೈ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕಸಬಾ ಹೋಬಳಿಯ ಗೌರಗಾನಹಳ್ಳಿ ಗ್ರಾಮದ ರಂಗರಾಜು ಅವರ ಮಗನಾದ ರಾಮಾಂಜನೇಯ್ಯ (31) ಮೃತಪಟ್ಟ ದುರ್ದೈವಿ. ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಮಾಂಜನೇಯ್ಯ ಸಂಸಾರ ನಡೆಸಲು ಕೈಸಾಲ ಮಾಡಿಕೊಂಡು ಸಾಲ ತೀರಿಸಲಾಗದೆ ಗೌರಗಾನಹಳ್ಳಿ ಗ್ರಾಮದ ಸಮೀಪ ಇರುವ ಸುವರ್ಣಮುಖಿ ನದಿಯ ದಡದ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪಿಎಸ್‌ಐ ಮುತ್ತುರಾಜು ಹಾಗೂ ಎಎಸ್‌ಐ ಯೋಗೀಶ್ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ
Get real time updates directly on you device, subscribe now.
Prev Post
Next Post
Comments are closed.