ಶಿರಾ: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನೇ ದಿನೆ ಹೆಚ್ಚುತ್ತಿದ್ದು, ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಹೆಚ್ಚು ಪ್ರಕರಣ ದಾಖಲಾಗುತ್ತಿರುವುದರಿಂದ ಪ್ರಯಾಣಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಂಚರಿಸಲು ಸೂಚನೆ ನೀಡಿ ಎಂದು ತಹಶೀಲ್ದಾರ್ ಮಮತ ಅವರು ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರಿಗೆ ಸ್ಥಳದಲ್ಲಿಯೇ ಕೊವಿಡ್ ಪರೀಕ್ಷೆ ಮಾಡಿಸುವ ಮೂಲಕ ಸಾರ್ವಜನಿಕರು ಹಾಗೂ ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಿದರು. ಬೇರೆ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ಬಸ್ ನಿಲ್ದಾಣಗಳಲ್ಲಿ ಮಾಡಲು ಪ್ರಾರಂಭ ಮಾಡಲಾಗಿದೆ. ಮೂರನೇ ಅಲೆಯ ಮೂನ್ಸೂಚನೆಯಿಂದ ಎಲ್ಲಾ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣಿಕರ ಜೊತೆಗೆ ಚಾಲಕರು ನಿರ್ವಾಹಕರು ಸಹಾ 2ನೇ ಲಸಿಕೆ ಪಡೆದು ವಾಹನ ಚಲಾಯಿಸಿ, ಕೊರೊನ ಭಯ ಬೇಡ, ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷ ಮಾರೇಗೌಡ ಹಾಗೂ ಆರೋಗ್ಯ ಸಿಬ್ಬಂದಿ ಹಾಜರಿದ್ದರು.
ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ: ಮಮತ
Get real time updates directly on you device, subscribe now.
Prev Post
Comments are closed.