ಅರಸು ತಂದ ಭೂ ಸುಧಾರಣಾ ಕಾಯ್ದೆ ಬಡವರಿಗೆ ವರದಾನ

374

Get real time updates directly on you device, subscribe now.

ತುಮಕೂರು: ದಿವಗಂತ ಡಿ.ದೇವರಾಜು ಅರಸು ಅವರು ಜಾರಿಗೆ ತಂದ ಉಳುವವನೇ ಭೂಮಿಯ ಒಡೆಯ ಭೂ ಸುಧಾರಣಾ ಕಾಯ್ದೆಯು ದೀನ ದಲಿತ, ಹಿಂದುಳಿದ ವರ್ಗಗಳಿಗೆ ವರದಾನವಾಗಿದೆ ಎಂದು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಕೋವಿಡ್‌-19ರ ಮಾರ್ಗಸೂಚಿ ಪಾಲಿಸುವುದರೊಂದಿಗೆ ಸರಳವಾಗಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ಡಿ.ದೇವರಾಜ ಅರಸು ಅವರ 106ನೇ ಜಯಂತಿಯಲ್ಲಿ ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಅರಸು ಅವರು ನಾಡು ಕಂಡ ಅಪರೂಪದ ಸಾಮಾಜಿಕ ಹರಿಕಾರರಾಗಿದ್ದರು, ಧೀಮಂತ ರಾಜಕಾರಣಿ, ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು, ಬಡವರ ಧ್ವನಿಯಾಗಿ ಭೂ ಸುಧರಣಾ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದ ಜನರಿಗೆ ಅಚ್ಚು ಮೆಚ್ಚಿನ ರಾಜಕಾರಣಿಯಾಗಿದ್ದರು ಎಂದು ತಿಳಿಸಿದರು.
ರಾಜಕಾರಣಿಯಾಗಿ ನಾಡಿಗೆ ಉತ್ತಮ ಕೊಡುಗೆ ನೀಡಿರುವ ದೇವರಾಜು ಅರಸು ಅವರ ಪುಣ್ಯಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಮಾತನಾಡಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸಮ ಸಮಾಜ ನಿರ್ಮಾಣ ಕನಸು ಕಂಡವರು, ಜೀತ ಹಾಗೂ ಮಲ ಹೊರುವ ಪದ್ಧತಿ ನಿರ್ಮೂಲನೆ ಮಾಡಿದವರು, ಹಿಂದುಳಿದ ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ, ಅರಣ್ಯ ಉಳಿಸುವ ಗ್ರೀನ್‌ ಬೆಲ್‌್ಟ ಕಾಯ್ದೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿ ತಂದು ನಾಡಿನ ಸುಭಿಕ್ಷೆಗೆ ದುಡಿದ ಅವರ ಹಾದಿಯಲ್ಲೆ ನಾವೆಲ್ಲರೂ ನಡೆಯಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ವಸತಿ ನಿಯಲದ ವಿದ್ಯಾರ್ಥಿಗಳಿಗಾಗಿ ಡಿ.ದೇವರಾಜ ಅರಸು ಅವರು ಸಾಧನೆ, ಜೀವನ ಮೌಲ್ಯಗಳ ಕುರಿತು ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕಡೂರು ತಾಲ್ಲೂಕಿನ ಈಜಿಹಳ್ಳಿಯ ಶರತ್‌ ಎಂ.ಆರ್‌, ತುಮಕೂರು ತಾಲ್ಲೂಕಿನ ಶೃತಿ ಡಿ., ಕಾವ್ಯ ಡಿ.ಸಿ., ಮೇಘಬಾಯಿ ಅವರಿಗೆ ಬಹುಮಾನ ವಿತರಿಸಿ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಮಹಾನಗರ ಪಾಲಿಕೆ ಮಹಾ ಪೌರರಾದ ಕೃಷ್ಣಪ್ಪ, ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಾಪುರವಾಡ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸುಬ್ರನಾಯ್‌್ಕ, ಭಾನುಮತಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಇದ್ದರು.

Get real time updates directly on you device, subscribe now.

Comments are closed.

error: Content is protected !!