ಸಿದ್ದಗಂಗಾ ಮಠಕ್ಕೆ ಸಚಿವ ಸೋಮಣ್ಣ ಭೇಟಿ

103

Get real time updates directly on you device, subscribe now.

ತುಮಕೂರು: ನಗರದ ಸಿದ್ದಗಂಗಾ ಮಠಕ್ಕೆ ವಸತಿ ಸಚಿವ ವಿ.ಸೋಮಣ್ಣ ಶನಿವಾರ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ನಂತರ ಮಾತನಾಡಿದ ಸಚಿವ ಸೋಮಣ್ಣ, ಕಾರ್ಯನಿಮಿತ್ತ ದಾವಣಗೆರೆಗೆ ತೆರಳುತ್ತಿದ್ದೆ, ಹಾಗಾಗಿ ಶ್ರೀಮಠಕ್ಕೆ ಬಂದು ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇನೆ, ಈ ಭಾಗದಲ್ಲಿ ನಾನು ಎಷ್ಟು ಬಾರಿ ಸಂಚರಿಸಿದರೂ ಶ್ರೀಮಠಕ್ಕೆ ಬಂದು ಹೋಗುವುದು ರೂಢಿ, ಹಾಗಾಗಿ ನಾನು ಮಠಕ್ಕೆ ಬರುವುದು, ಹೋಗುವುದು ಹೊಸತೇನಲ್ಲ ಎಂದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಮುಖಂಡ ಹೆಬ್ಬಾಕ ರವಿಶಂಕರ್‌ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!