ಪಿಎಂ ಕಲ್ಯಾಣ ಯೋಜನೆ ಸೌಲಭ್ಯ ಸಕಾಲಕ್ಕೆ ತಲುಪಿಸಿ: ಡೀಸಿ

349

Get real time updates directly on you device, subscribe now.

ತುಮಕೂರು: ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್‌ ನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಸ್ಥ ಫಲಾನುಭವಿಗಳಿಗೆ ಸಕಾಲಕ್ಕೆ ಯೋಜನಾ ಸೌಲಭ್ಯ ತಲುಪಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ವ್ಯಾಪಾರಸ್ಥರ ಕುಟುಂಬಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕೈಗೊಂಡು ಫಲಾನುಭವಿಗಳನ್ನು ಗುರುತಿಸಿ ನಿಗದಿತ ಅವಧಿಯೊಳಗಾಗಿ ಸೌಲಭ್ಯ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ತರಬೇತಿ ಹೊಂದಿದ ಸಿಬ್ಬಂದಿಗಳಿಂದ ಸ್ಥಳೀಯ ನಗರ ಸಂಸ್ಥೆಗಳ ಮಟ್ಟದಲ್ಲಿ ಶಿಬಿರ, ಬೀದಿಬದಿ ವ್ಯಾಪಾರ ಸ್ಥಳದಲ್ಲಿ, ಮನೆ ಮನೆ ಭೇಟಿ ಮಾಡುವ ಮೂಲಕ ಸಮೀಕ್ಷೆ ಕೈಗೊಳ್ಳಬೇಕು. ಸಮೀಕ್ಷೆ ಮೂಲಕ ಗುರುತಿಸಲ್ಪಟ್ಟ ಫಲಾನುಭವಿಗಳ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡಿ, ಸಂಗ್ರಹಿಸಿದ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಬೇಕು ಎಂದು ಸೂಚನೆ ನೀಡಿದರು.
ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜನ್‌ಧನ್‌ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಾರರ ನೋಂದಣಿ, ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಸೌಲಭ್ಯವನ್ನು ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.
ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತರಲಾಗಿರುವ ಪ್ರಧಾನ ಮಂತ್ರಿ ಕಲ್ಯಾಣ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ತಲುಪಬೇಕು. ಅನರ್ಹರಿಗೆ ಸೌಲಭ್ಯ ತಲುಪಬಾರದು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸಯ್ಯ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!