ವಿವಿಧ ಬೇಡಿಕೆ ಈಡೇರಿಕೆಗೆ ದಸಂಸ ಪ್ರತಿಭಟನೆ

471

Get real time updates directly on you device, subscribe now.

ತುಮಕೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಈ ವೇಳೆ ಡಿಎಸ್‌ಎಸ್‌ ಸಮಿತಿಯ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ, ದಲಿತರ ಮೇಲೆ ಇಂದಿನ ದಿನಗಳಲ್ಲಿ ದಬ್ಬಾಳಿಕೆ ಹೆಚ್ಚಾಗುತ್ತಿದ್ದು ಜೀವನ ನಡೆಸುವುದೇ ದುಸ್ತರವಾಗಿದೆ ಕೂಡಲೇ ಸರ್ಕಾರ ದಲಿತರ ರಕ್ಷಣೆಗೆ ಮುಂದಾಗಬೇಕು, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು, ಪಿಟಿಸಿಎಲ್‌ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೂಡಲೇ ಸುಗ್ರಿವಾಜ್ಞೆ ತಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು, ರಾಜ್ಯಾದ್ಯಂತ ಗ್ರಾಮ ಪಂಚಾಯತ್‌ ಹಾಗೂ ಮಹಾನಗರ ಪಾಲಿಕೆ, ನಗರಸಭೆ ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ನೀಡುತ್ತಿರುವ ಸಾಲ ಸೌಲಭ್ಯ ನೀಡುವ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳಬೇಕು, ಇನ್ನು ರಾಜ್ಯದಲ್ಲಿ ಎಸ್ಸಿ ಎಸ್ಟಿ ಜನಾಂಗದ ಆದಾಯ ಮಿತಿ ಬಗ್ಗೆ ಚಿಂತನೆ ನಡೆಸಿ ಕ್ರಮ ಕೈಗೊಳ್ಳಬೇಕು, ದೇಶದಲ್ಲಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗೆ ಕಡಿವಾಣ ಹಾಕಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದಲಿತ ಸಂಘರ್ಷ ಸಮಿತಿಯಿಂದ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಕೇಬಲ್‌ ರಘುಕುಮಾರ್‌, ಸಿ.ಕೆ.ತಿಪ್ಪೇಸ್ವಾಮಿ, ಗಾಂಧಿ ರಾಜು, ಮರಳೂರು ಕೃಷ್ಣಮೂರ್ತಿ, ದೊಡ್ಡೇರಿ ಕಣಿಮಯ್ಯ, ಭೂತೇಶ್‌, ನರಸಯ್ಯ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!