ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿಪೂಜೆ

121

Get real time updates directly on you device, subscribe now.

ತುಮಕೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಗರದ 6ನೇ ವಾರ್ಡ್‌ ವ್ಯಾಪ್ತಿಯ ದಿಬ್ಬೂರು ಜನತಾ ಕಾಲೋನಿಯಲ್ಲಿ ಚರಂಡಿ, ಕಾಂಕ್ರೀಟ್‌ ರಸ್ತೆ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಭೂಮಿಪೂಜೆ ನೆರವೇರಿಸಿದರು.
ದಿಬ್ಬೂರು ಜನತಾ ಕಾಲೋನಿಯಲ್ಲಿ 1 ಕೋಟಿ 50 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್‌, ದಿಬ್ಬೂರು ಜನತಾ ಕಾಲೋನಿಯಲ್ಲಿ ಸುಮಾರು ಕಾಂಕ್ರೀಟ್‌ ರಸ್ತೆ, ಚರಂಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ನಾಗರಿಕರಿಗೆ ಕೊಂಚ ತೊಂದರೆಯಾಗಲಿದೆ. ಅದನ್ನು ದೊಡ್ಡದು ಮಾಡದೆ ಸಹಕರಿಸಿದರೆ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಕಾಮಗಾರಿ ನಡೆಯುವ ಸಂದರ್ಭದಲ್ಲಿ ಗುಣಮಟ್ಟಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನಾಗರಿಕರು ಗಮನ ಹರಿಸಬೇಕು ಎಂದು ಅವರು ಮನವಿ ಮಾಡಿದರು.
ಸಚಿವ ಸೋಮಣ್ಣ ಅವರು ನಮ್ಮ ಮನವಿಗೆ ಸ್ಪಂದಿಸಿ ದಿಬ್ಬೂರ ಜನತಾ ಕಾಲೋನಿ ಅಭಿವೃದ್ಧಿಗಾಗಿ 1 ಕೋಟಿಗೂ ಅಧಿಕ ಅನುದಾನವನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಸೋಮಣ್ಣನವರನ್ನು ಈ ವಾರ್ಡ್‌ಗೆ ಕರೆ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ನಗರದಲ್ಲೇ ಅತ್ಯಂತ ಶಾಂತವಾದ ವಾರ್ಡ್‌ ಎಂದರೆ ಅದು ದಿಬ್ಬೂರು. ಈ ವಾರ್ಡ್‌ನಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಮತ್ತಷ್ಟು ಶುಚಿತ್ವ ವಾರ್ಡ್‌ ಆಗಲಿದೆ. ಈ ದಿಸೆಯನ್ನು ನಾವುಗಳು ಸಹ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಈ ಕಾಮಗಾರಿ ಸರಾಗವಾಗಿ ನಡೆದು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲು ಈ ಭಾಗದ ನಾಗರಿಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ವೀಣಾ ಮನೋಹರಗೌಡ, ಎಸ್‌. ಶಿವಪ್ರಸಾದ್‌, ಮನೋಹರಗೌಡ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!