ಡಿವೈಡರ್ ಗೆ ಕಾರ್‌ ಡಿಕ್ಕಿ- ದಂಪತಿ ಸಾವು

448

Get real time updates directly on you device, subscribe now.

ಶಿರಾ: ವ್ಯಾಗನರ್‌ ಕಾರೊಂದು ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿ 5 ವರ್ಷದ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಬೈಪಾಸ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ದುರ್ದೈವಿಗಳು ವಿನಾಯಕ ಸ್ವಾಮಿ ಬೆಟಗೇರಿ ಮಠ (35) ಹಾಗೂ ಇವರ ಪತ್ನಿ ಶಿಲ್ಪ (33) ಎಂದು ತಿಳಿದುಬಂದಿದ್ದು, ಇವರು ಹಾವೇರಿಯಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಶಿರಾ ನಗರದ ಬೈಪಾಸ್‌ನಲ್ಲಿ ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಉರುಳಿಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬೆಂಗಳೂರಿಗೆ ರವಾನಿಸಲಾಗಿದೆ, ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!