ಡಾಕ್ಟರ್‌ ನಿರ್ಲಕ್ಷ್ಯಕ್ಕೆ ಮಗು ಸಾವು

ಗುಬ್ಬಿಯಲ್ಲಿ ಆಸ್ಪತ್ರೆ ಮುಂದೆ ಪೋಷಕರ ಪ್ರತಿಭಟನೆ

331

Get real time updates directly on you device, subscribe now.

ಗುಬ್ಬಿ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಎಳೆ ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಅವರ ಸಂಬಂಧಿಕರು ಪ್ರತಿಭಟನೆ ಮಾಡಿದ ಘಟನೆ ನಡೆಯಿತು.
ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಗರ್ಭಿಣಿ ಮಂಜಮ್ಮ ಎಂಬುವವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆ ಆಗುತ್ತದೆ ಎಂದು ವೈದ್ಯರು ಸಲಹೆ ನೀಡಿದ್ದರು, ತಡರಾತ್ರಿ ನೋವು ಹೆಚ್ಚಾದ ಹಿನ್ನಲೆ ಆಸ್ಪತ್ರೆಯಲ್ಲಿ ದಾದಿಯರನ್ನು ಹೊರತುಪಡಿಸಿ ವೈದ್ಯರಿಲ್ಲದೆ ಗರ್ಭಿಣಿಗೆ ಚಿಕಿತ್ಸೆ ನೀಡದೆ ಕಾಲಹರಣ ಮಾಡಿದ ಸಿಬ್ಬಂದಿ ಮಂಗಳವಾರ ಬೆಳಗ್ಗೆ 9 ರ ಸಮಯದಲ್ಲಿ ಹೆರಿಗೆ ವೈದ್ಯೆ ರೇಖಾ ಅವರು ಶಸ್ತ್ರ ಚಿಕಿತ್ಸೆಗೆ ಕರೆದುಕೊಂಡು ಹೋದ ಸ್ವಲ್ಪ ಸಮಯದ ನಂತರ ಮಗು ಸಾವನ್ನಪ್ಪಿದೆ ಎಂದು ಪೋಷಕರಿಗೆ ತಿಳಿಸುತ್ತಾರೆ.
ಪೋಷಕರು ಮತ್ತು ಸಂಬಂಧಿಕರು ಈ ವಿಚಾರ ತಿಳಿದು ಕಂಗಾಲಾಗಿ ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಆಸ್ಪತ್ರೆಯ ಆವರಣದಲ್ಲಿ ನಡೆಯಿತು.
ನಮ್ಮ ಮಗುವಿನ ಸಾವಿಗೆ ವೈದ್ಯರೇ ಕಾರಣ ಎಂದು ಪೋಷಕರು ಮತ್ತು ಮಗುವಿನ ಸಂಬಂಧಿಕರು ಆರೋಪಿಸಿ ಆಸ್ಪತ್ರೆಯ ಬಾಗಿಲ ಬಳಿ ಮಗುವಿನ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸಿ ವೈದ್ಯರಿಗೆ ಹಿಡಿಶಾಪ ಹಾಕಿದರು.
ಇದೇ ಸಂದರ್ಭದಲ್ಲಿ ಹಲವು ಸಾರ್ವಜನಿಕರು ಗುಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಯದಲ್ಲಿ ವೈದ್ಯರು ಇರುವುದೇ ಇಲ್ಲ ಎಂದು ಆರೋಪ ಮಾಡಿದರು.
ಮೂರು ತಾಸು ಕಳೆದರೂ ಮಗುವಿನ ಸಂಬಂಧಿಕರ ಮತ್ತು ಪೋಷಕರ ಅಳಲು ಕೇಳುವವರಿರಲಿಲ್ಲ, ಸ್ಥಳಕ್ಕೆ ಗುಬ್ಬಿ ಪಿಎಸ್‌ಐ ಜ್ಞಾನಮೂರ್ತಿ ಭೇಟಿ ನೀಡಿ ಮಗುವಿನ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಆದರೆ ಪೋಷಕರು ವೈದ್ಯರ ನಿರ್ಲಕ್ಷ್ಯಕ್ಕೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸುತ್ತಿದ್ದಾರೆ.

Get real time updates directly on you device, subscribe now.

Comments are closed.

error: Content is protected !!