ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಡಿ ಕೈಗೊಳ್ಳುವ ಕಾರ್ಯಕ್ರಮಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟಜಾತಿ ಉಪಯೋಜನೆ, ಗಿರಿಜನ ಉಪಯೋಜನೆಗೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪರಿಶಿಷ್ಟಜಾತಿ, ಗಿರಿಜನ ಉಪಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ಸದ್ಬಳಕೆ ಮಾಡಿಕೊಂಡು ಯೋಜನೆ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಆಗಸ್ಟ್ 21ರ ಮಾಹೆಯ ಅಂತ್ಯದೊಳಗೆ ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಸಾರಿಗೆ, ಅರಣ್ಯ, ಸಾರ್ವಜನಿಕ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಲೋಕೋಪಯೋಗಿ, ಪಂಚಾಯತ್ ರಾಜ್ ಸೇರಿದಂತೆ 41 ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಪರಿಶೀಲಿಸಿದ ಅವರು ಕ್ರಿಯಾ ಯೋಜನೆಯಂತೆ ಕಾರ್ಯಕ್ರಮ ರೂಪಿಸಿಕೊಳ್ಳುವುದರ ಜೊತೆಗೆ ವಿನಾಕಾರಣ ಮುಂದೂಡದೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಎಸ್‌ಸಿಪಿ ಯೋಜನೆಯಡಿ ಶೇ.72 ಹಾಗೂ ಟಿಎಸ್‌ಪಿ ಯೋಜನೆಯಡಿ ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಡಿಡಿಪಿಐ ಸಿ.ನಂಜಯ್ಯ, ಡಿಯುಡಿಸಿ ಯೋಜನಾ ನಿರ್ದೇಶಕಿ ಶುಭಾ, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನ, ತೋಟಗಾರಿಕೆ ಉಪನಿರ್ದೇಶಕ ಬಿ.ರಘು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮ ಶೀಘ್ರ ಅನುಷ್ಠಾವಾಗಲಿ: ಡೀಸಿ
Get real time updates directly on you device, subscribe now.
Prev Post
Next Post
Comments are closed.