ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡಿ

90

Get real time updates directly on you device, subscribe now.

ಕುಣಿಗಲ್‌: ಕಂದಾಯ ಇಲಾಖೆ ಗ್ರಾಮ ಸಹಾಯಕರಿಗೆ ಯಾವುದೇ ರೀತಿಯ ಸೇವಾ ಭದ್ರತೆ ನೀಡದೆ ದುಡಿಸಿಕೊಳ್ಳುತ್ತಿರುವ ಸರ್ಕಾರದ ಕ್ರಮ ಖಂಡನೀಯ ಎಂದು ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ತಾಲೂಕು ಅಧ್ಯಕ್ಷ ಹೆಚ್‌.ಜಿ.ರಂಗಸ್ವಾಮಿ ಹೇಳಿದರು.
ಸೆ.22 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪ್ರತಿಭಟನೆಗೆ ತೆರಳಲು ಪೂರ್ವಭಾವಿ ಸಭೆ ಹಾಗೂ ಅಂದು ನೌಕರರಿಗೆ ರಜೆ ಹಾಕದೆ ಅನುಮತಿ ಕೊಡುವಂತೆ ಸೋಮವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೆ ಒತ್ತಾಯಿಸಿ ಮನವಿ ಸಲ್ಲಿಸಿ ಮಾತನಾಡಿ, ಕಳೆದ ಮುವತ್ತು ವರ್ಷಗಳಿಂದಲೂ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ಅತ್ಯಂತ ಕನಿಷ್ಟ ವೇತನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಮಾತ್ರ ಗ್ರಾಮ ಸಹಾಯಕರಿಗೆ ಯಾವುದೇ ಸೇವಾ ಭದ್ರತೆ ನೀಡುತ್ತಿಲ್ಲ, ಅನಾರೋಗ್ಯಕ್ಕೆ ಈಡಾದಾರೆ ಕನಿಷ್ಟ ಮಾನವೀಯತೆ ಹಿನ್ನೆಲೆಯಲ್ಲಾದರೂ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡುತ್ತಿಲ್ಲ. ಇಲಾಖೆಯ ಕೆಳಹಂತದಲ್ಲಿ ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ದುಡಿಯುವ ಗ್ರಾಮ ಸಹಾಯಕರನ್ನು ಸರ್ಕಾರಿ ನೌಕರರು ಎಂದು ಗುರುತಿಸುವ ಕಾರ್ಯ ಮಾಡಿಲ್ಲ. ಹಲವು ದಶಕಗಳಿಂದಲೂ ಕೇವಲ ಗೌರವ ಧನದ ಆಧಾರದ ಮೇಲೆ ದುಡಿಸಿಕೊಳ್ಳುತ್ತಿದ್ದಾರೆ. ಹಲವಾರು ಸರ್ಕಾರಗಳು ಬಂದಿವೆ, ಮುಖ್ಯಮಂತ್ರಿಗಳು ಆಗಿಹೋಗಿದ್ದಾರೆ, ಎಲ್ಲರಿಗೂ ಮನವಿ ನೀಡಿದ್ದು ಕೇವಲ ಭರವಸೆ ನೀಡುತ್ತಿದ್ದಾರೆ ಹೊರತು ಭರವಸೆ ಈಡೇರಿಸುವ ಯಾವುದೇ ಕೆಲಸವಾಗುತ್ತಿಲ್ಲ ಎಂದರು.
ತಾಲೂಕಿನಲ್ಲಿ 80 ಮಂದಿ, ಜಿಲ್ಲೆಯಲ್ಲಿ ಐನೂರಕ್ಕೂ ಹೆಚ್ಚು ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದು ಇನ್ನಾದರೂ ಸರ್ಕಾರ ಗ್ರಾಮ ಸಹಾಯಕರ ಸೇವೆ ಗುರುತಿಸಿ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲು ಕ್ರಮ ವಹಿಸಬೇಕೆಂದು ಒತ್ತಾಯಿಸಿ ಗ್ರೇಡ್‌-2 ತಹಶೀಲ್ದಾರ್‌ ಗೋವಿಂದರಾಜು ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಕಾರ್ಯದರ್ಶಿ ಚಿಕ್ಕಣ್ಣ, ಸಂಘಟನಾ ಕಾರ್ಯದರ್ಶಿ ಆನಂದಕುಮಾರ್‌, ನರಸಿಂಹಮೂರ್ತಿ, ನಿರ್ದೇಶಕರಾದ ದಿನೇಶ, ಮಂಜೇಶ, ರೂಪ, ಯೋಗೀಶ, ರಮೇಶ, ಪುಟ್ಟಸ್ವಾಮಿ ಸಿದ್ದಲಿಂಗಯ್ಯ, ಮಂಜುನಾಥ, ರಂಗಸ್ವಾಮಿ, ನರಸಿಂಹಮೂರ್ತಿ, ಪ್ರಕಾಶ, ಗೋವಿಂದಯ್ಯ,ಹರೀಶ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!