ಎರಡನೇ ಹಂತದ ಕೋವಿಡ್‌ ಲಸಿಕಾ ಮೆಗಾ ಮೇಳ ಯಶಸ್ವಿಗೊಳಿಸಿ: ಡೀಸಿ

394

Get real time updates directly on you device, subscribe now.

ತುಮಕೂರು: ಕೋವಿಡ್‌ ಲಸಿಕಾ ಮೆಗಾ ಮೇಳ ಕಾರ್ಯಕ್ರಮವನ್ನು ಇಂದು ಸೆ.29 ರಂದು ಹಮ್ಮಿಕೊಳ್ಳಲಾಗಿದ್ದು, ಈ ಮೇಳದಲ್ಲಿ 1ಲಕ್ಷ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಲಸಿಕಾ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಬುಧವಾರ ನಡೆಯಲಿರುವ ಲಸಿಕಾ ಮೇಳದಲ್ಲಿ ಎರಡನೇ ಡೋಸ್‌ ಲಸಿಕೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ನಿರ್ದೇಶಿಸಿದರು.
ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ಪಡೆದಿರುವವರು ಎರಡನೇ ಡೋಸ್‌ ಪಡೆಯಲು ಅರ್ಹರಾಗಿದ್ದಲ್ಲಿ ಹತ್ತಿರದ ಆರೋಗ್ಯ ಕೇಂದ್ರ ಅಥವಾ ಲಸಿಕಾ ಕೇಂದ್ರಕ್ಕೆ ತೆರಳಿ ಎರಡನೇ ಡೋಸ್‌ ಲಸಿಕೆ ಪಡೆಯಲು ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ಆಯಾ ತಾಲೂಕು ಕಾರ್ಯಪಡೆಯು ಜವಾಬ್ದಾರಿ ಹೊತ್ತು ಲಸಿಕಾ ಮೇಳದಲ್ಲಿ ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕು. ಲಸಿಕಾ ಮೇಳದ ದಿನದಂದು ನಿಗಧಿತ ಸ್ಥಳದಲ್ಲಿ ಹಾಜರಿದ್ದು, ಕಾರ್ಯೋನ್ಮುಖರಾಗಬೇಕು. ಎಲ್ಲಾ ಅಧಿಕಾರಿಗಳು ಸಮನ್ವಯ ಸಾಧಿಸಿ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಲಸಿಕಾ ಮೇಳದ ಬಗ್ಗೆ ಮಾಹಿತಿ ಒದಗಿಸಬೇಕು. ಲಸಿಕಾ ಮೆಗಾ ಮೇಳ ಯಶಸ್ವಿಗೊಳಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಸಿಬ್ಬಂದಿಗಳನ್ನು ಬಳಸಿಕೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಪವಿಭಾಗಾಧಿಕಾರಿ ಅಜಯ್‌, ಸೋಮಪ್ಪ ಕಡಕೋಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಪಾಲಿಕೆ ಆಯುಕ್ತೆ ರೇಣುಕಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!