ತುಮಕೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆನ್ನುವುದು ಜನರ ಆಶಯವಾಗಿದ್ದು ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಬೇಕು, ಬೂತ್ ಮಟ್ಟದ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಬೂತ್ ಏಜೆಂಟ್ ಗಳಿಗೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಿದ್ಧತೆ ಹಾಗೂ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಸಂಬಂಧ ಪಕ್ಷದ ಮುಖಂಡರು ಹಾಗೂ ಬೂತ್ ಏಜೆಂಟ್ ಗಳ ಸಭೆಯಲ್ಲಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಜನರನ್ನು ಭಾವಾನಾತ್ಮಕವಾಗಿ ಜನರನ್ನು ಬಿಜೆಪಿ ಸೆಳೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಬೂತ್ ಮಟ್ಟದ ಮುಖಂಡರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚನೆ ನೀಡಿದರು.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದು, ಬಿಜೆಪಿ ಸರ್ಕಾರ ಯಾವುದೇ ಕಾರ್ಯಕ್ರಮ ರೂಪಿಸುತ್ತಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ವರ್ಷ ಉತ್ತಮ ಆಡಳಿತ ನೀಡಿದ್ದು, ಜನರಿಗೂ ಸಹ ಕಾಂಗ್ರೆಸ್ ಸರ್ಕಾರ ಬರಬೇಕೆಂದು ಬಯಸುತ್ತಿದ್ದಾರೆ. ಜಿಲ್ಲೆಯ 11 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪರ ವಾತಾವರಣವಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಮುಂಬರುವ ವಿಧಾನಪರಿಷತ್, ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ ಹಾಗೂ ಜಿಪಂ, ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಮೂಲಕ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತವಾಗಿ ಹೋರಾಡಬೇಕಿದೆ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪಕ್ಷ ನೀಡುವ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸಬೇಕೆಂದು ಕರೆನೀಡಿದರು.
75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಮಹಾತ್ಮಗಾಂಧಿ ಅವರ ಜನ್ಮದಿನವನ್ನು ವರ್ಷಪೂರ್ತಿ ಸ್ಮರಿಸುವ ನಿಟ್ಟಿನಲ್ಲಿ ಪಕ್ಷ ಹಮ್ಮಿಕೊಂಡಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಪ್ರತಿಬೂತ್ ಮಟ್ಟದಲ್ಲಿಯೂ ಆಯೋಜನೆ ಮಾಡಬೇಕು, ಪ್ರತಿ ಬೂತ್ ಮಟ್ಟದಲ್ಲಿ ಡಿಜಿಟಲ್ ಯೂತ್ ಗಳನ್ನು ಗುರುತಿಸಿ ಅವರಿಗೆ ಸಾಮಾಜಿಕ ಜಾಲತಾಣ ಬಳಸಿಕೊಂಡು ವಾರ್ಡ್, ಪಂಚಾಯತಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಉತ್ಸಾಹಿ ಯುವಕರನ್ನು ಗುರುತಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ ಯಾರಿಗೂ ಅಧಿಕಾರ ಶಾಶ್ವತವಲ್ಲ ಎನ್ನುವುದನ್ನು ಅರಿತು ಪಕ್ಷದ ಮುಖಂಡರು ಹಾಗೂ ನಾಯಕರು ಕಾರ್ಯ ನಿರ್ವಹಿಸಬೇಕು, ಪಕ್ಷ ಹೇಳಿದ ಕೆಲಸ ಮಾಡುವ ಮೂಲಕ ಅಧಿಕಾರಕ್ಕೆ ತರಬೇಕು, ಕೆಲಸ ಮಾಡಲು ಆಗದೆ ಇದ್ದರೆ ಬೇರೆಯವರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಪಕ್ಷ ನೀಡಿರುವ ಕಾರ್ಯಕ್ರಮಗಳನ್ನು ನಿಗದಿತ ಅವಧಿಯಲ್ಲಿಯೇ ಪೂರ್ಣಗೊಳಿಸಬೇಕು, ಪ್ರತಿ ಬ್ಲಾಕ್ ಮಟ್ಟದ ಮುಖಂಡರು ಮತದಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು, ಬೂತ್ ಮುಖಂಡರು ಬಿಎಲ್‌ಒಗಳೊಂದಿಗೆ ಉತ್ತಮ ಸಂಪರ್ಕ ಹೊಂದುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಮುಖಂಡರಾದ ಕೆಂಚಮಾರಯ್ಯ, ಹೊನ್ನಗಿರಿಗೌಡ, ನರಸೀಯಪ್ಪ, ಮಂಜುನಾಥ್, ಎಚ್.ಸಿ.ಹನುಮಂತಯ್ಯ, ಮುರುಳೀಧರ ಹಾಲಪ್ಪ, ವಿಜಯಕುಮಾರ್, ಸುಜಾತ, ಪುಟ್ಟರಾಜು ಇತರರು ಇದ್ದರು.
ಕಾಂಗ್ರೆಸ್ ಬಲಪಡಿಸಿ ಅಧಿಕಾರಕ್ಕೆ ತನ್ನಿ: ರಮೇಶ್
Get real time updates directly on you device, subscribe now.
Next Post
Comments are closed.