ಈ ಸಂಜೆ ಕುಮಾರ್‌ ಇನ್ನಿಲ್ಲ

707

Get real time updates directly on you device, subscribe now.

ತುಮಕೂರು: ಪತ್ರಕರ್ತ ಸಿ.ಎಸ್‌.ಕುಮಾರ್ (52) ಹೃದಯಾಘಾತದಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೆ ಹೃದಯಾಘಾತಕ್ಕೊಳಗಾಗಿದ್ದ ಪತ್ರಕರ್ತ ಕುಮಾರ್ ಗೆ ಸ್ಟಂಟ್‌ ಅಳವಡಿಸಲಾಗಿತ್ತು. ತಡರಾತ್ರಿ ಮನೆಯಲ್ಲಿ ಊಟ ಮುಗಿಸಿದ ಬಳಿಕ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬದವರು 108 ಆಂಬ್ಯುಲೆನ್ಸ್ ನಲ್ಲಿ ತುಮಕೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಸಂಜೆ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾಗಿದ್ದರು. ಪತ್ರಕರ್ತ ಕುಮಾರ್‌ ಅವರ ನಿಧನಕ್ಕೆ ಶಾಸಕರಾದ ಜ್ಯೋತಿಗಣೇಶ್‌, ಗೌರಿಶಂಕರ್‌, ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್ ಕುಮಾರ್‌ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಅಂತಿಮ ದರ್ಶನ ಪಡೆದ ಪರಂ
ಪತ್ರಕರ್ತ ಕುಮಾರ್‌ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಚೇಳೂರಿಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟಂಬದವರಿಗೆ ಸಾಂತ್ವಾನ ಹೇಳಿದರು.
ಪತ್ರಕರ್ತ ಕುಮಾರ್‌ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮವಾದ ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಮಧ್ಯಾಹ್ನ ನೆರವೇರಿತು. ಮೃತರು ತಾಯಿ, ತಮ್ಮ, ತಂಗಿ ಸೇರಿದಂತೆ ಕುಟುಂಬದವರನ್ನು ಅಗಲಿದ್ದಾರೆ.

ಮೊನ್ನೆಯಷ್ಟೇ ಸಿದ್ಧಗಂಗಾ ಆಸ್ಪತ್ರೆಯಲ್ಲಿ ನಡೆದ ಹೃದಯ ತಪಾಸಣೆ ಮತ್ತು ಸಂವಾದದಲ್ಲಿ ಪಾಲ್ಗೊಂಡಿದ್ದ ಕುಮಾರ್‌ ಹೃದ್ರೋಗಿಗಳು ಅನುಸರಿಸಬೇಕಾದ ಹಲವು ಸಲಹೆಗಳನ್ನು ಪ್ರಶ್ನೆ ಮಾಡಿ ಕೇಳುತ್ತಿದ್ದರು. ಈ ಹಿಂದೆ ಎರಡು ಭಾರಿ ಹೃದಯಘಾತಕ್ಕೆ ಒಳಗಾಗಿದ್ದು ಕುಮಾರ್‌ ಒತ್ತಡದಿಂದ ಹೊರ ಬರುವಲ್ಲಿ ಸಾಧ್ಯವಾಗಲಿಲ್ಲ. ಸಾಕಷ್ಟು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಮಾಡುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡುತ್ತಿದ್ದ ಕುಮಾರ್‌ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇನ್ನಷ್ಟು ಕಾಳಜಿ ವಹಿಸುತ್ತಾರೆ ಎಂಬ ನಂಬಿಕೆ ಈಗ ಸುಳ್ಳಾಯಿತು. ಕುಮಾರ್‌ ನಮ್ಮೊಂದಿಗಿರುವುದಿಲ್ಲ. ಕುಮಾರ್‌ ಇನ್ನು ನೆನಪು ಮಾತ್ರ.

Get real time updates directly on you device, subscribe now.

Comments are closed.

error: Content is protected !!