ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಡೀಸಿ ಚಾಲನೆ

365

Get real time updates directly on you device, subscribe now.

ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಭಾರತ ಸರಕಾರದ ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿನಯ್‌ ಕುಮಾರ್‌ ಮಾತನಾಡಿ, ಪ್ಲಾಸ್ಟಿಕ್‌ ಹಾಗೂ ಇತರೆ ತ್ಯಾಜ್ಯ ವಸ್ತುಗಳ ಬಳಕೆಯಿಂದ ಪರಿಸರ ಹಾಳಾಗುತ್ತಿದೆ. ಮನುಷ್ಯರಾದ ನಾವು ಅರಿವಿದ್ದರೂ ಸಹ ನಿತ್ಯ ಬಳಸುವ ಪ್ಲಾಸ್ಟಿಕ್‌ ಬ್ಯಾಗ್‌ ಇತ್ಯಾದಿ ವಸ್ತುಗಳನ್ನು ಎಲ್ಲೆಂದರಲ್ಲಿ ಹಾಕುವ ಮೂಲಕ ನಮ್ಮ ಸುತ್ತಲಿನ ಪರಿಸರವನ್ನು ನಾವೇ ಮಾಲಿನ್ಯ ಮಾಡುತ್ತಿದ್ದೇವೆ. ತ್ಯಾಜ್ಯ ವಸ್ತುಗಳ ಸಮರ್ಪಕ ನಿರ್ವಹಣೆಯಾದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ. ಆದ್ದರಿಂದ, ಯುವಜನರು ಪರಿಸರದ ಮಹತ್ವವನ್ನು ಅರಿತು ನಮ್ಮ ಸುತ್ತಲಿನ ಜನರಿಗೆ ಇಂತಹ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು, ಎಸ್‌ಎಸ್‌ಐಟಿ ಕಾಲೇಜಿನ ಕಾರ್ಯಕ್ರಮ ಸಂಯೋಜಕ ರವಿ ಕಿರಣ್‌, ಎನ್‌ಸಿಸಿ ಅಧಿಕಾರಿ ಜಯ ಪ್ರಕಾಶ್‌, ತುಮಕೂರು ವಿವಿಯ ಎನ್‌ಎಸ್‌ಎಸ್‌ ಸಂಯೋಜಕ ಮೌನೇಶ್ವರ ರಾವ್‌, ವಿದ್ಯೋದಯ ಕಾನೂನು ಕಾಲೇಜಿನ ಕಿಶೋರ್‌ ಹಾಗೂ ಹಲವು ಯುವಜನರು ಹಾಜರಿದ್ದರು.
ನೆಹರು ಯುವ ಕೇಂದ್ರದ ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ಸ್ವಯಂ ಸೇವಕರು, ಎನ್‌ಎಸ್‌ಎಸ್‌, ಎನ್‌ಸಿಸಿ ವಿಭಾಗದ ವಿದ್ಯಾರ್ಥಿಗಳು ಅಮಾನಿಕೆರೆ ಉದ್ಯಾನದ ರಸ್ತೆ ಬದಿಯಲ್ಲಿ ಸ್ವಚ್ಛತೆ ಮಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಿದರು.

Get real time updates directly on you device, subscribe now.

Comments are closed.

error: Content is protected !!